ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.
ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು.
ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಕೈ ಬಲಪಡಿಸುತ್ತೆವೆ ಎಂದು ಇಬ್ರಾಹಿಂ ತಿಳಿಸಿದರು.
ಪಂಜಾಬ್ ನಲ್ಲಿ ಗೋದಿಯ ಒಂದು ತಳಿಗೆ ದೇವೆಗೌಡ ಎಂದು ಹೆಸರಿಡಲಾಗಿದೆ.ದೇವೇಗೌಡರು ಅಪ್ಪಿತಪ್ಪಿ ಒಕ್ಕಲಿಗರ ಜಾತಿಯಲ್ಲಿ ಹುಟ್ಟಿದರು. ಬೇರೆ ಜಾತಿಯಲ್ಲಿ ಹುಟ್ಟಿದ್ದರೆ ಹಳ್ಳಿ ಹಳ್ಳಿಗಳಲ್ಲಿ ಜನರು ಅವರ ಪ್ರತಿಮೆ ಅನಾವರಣ ಮಾಡುತ್ತಿದ್ದರು ಎಂದರು.
ಕರ್ನಾಟಕದಲ್ಲಿ ಇವತ್ತಿನಿಂದ ಶುಭ ಕಾಲ ಆರಂಭವಾಗಿದೆ,ರಾಜ್ಯದಲ್ಲಿ ಉತ್ತಮವಾದ ಕಾಲ ಕಾಣುತ್ತೇವೆ. ದೇವೇಗೌಡರು 11 ತಿಂಗಳು ಪ್ರಧಾನಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಸಂಧರ್ಭದಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಸಿ ಎಂ ಇಬ್ರಾಹಿಂ ಹಾಡಿ ಹೊಗಳಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್