January 11, 2026

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರ ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದ್ದು, ಇದರಿಂದ ಸಾಮಾನ್ಯ ಜನರು ಸಹ ವಿಮಾನ ಯಾನ ಕೈಗೊಳ್ಳುವುದು ಸಾಧ್ಯವಾಗಲಿದೆ. ಎರಡು ಹಂತಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ರನ್ ವೇ ನಿರ್ಮಾಣ ಕಾರ್ಯ ಹಾಗೂ ಟರ್ಮಿನಲ್ ನಿರ್ಮಾಣ ಕಾರ್ಯ ಜೊತೆಯಾಗಿಯೇ ನಡೆಯುತ್ತಿದೆ. ನಿಗದಿತ ಅವಧಿಯ ಒಳಗಾಗಿ ಮಾತ್ರವಲ್ಲದೆ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು. 

ಶಿವಮೊಗ್ಗದಲ್ಲಿ ಇಂದು ರೈಲ್ವೇ ಓವರ್ ಬ್ರಿಡ್ಜ್ ಮತ್ತು ಹೊಸ ಸೇತುವೆ ನಿರ್ಮಾಣದ ಸುಮಾರು 600ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

About The Author

Leave a Reply

Your email address will not be published. Required fields are marked *