ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಶಾಲೆಯಲ್ಲಿ ಹಲವು ದಶಕಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿಧನರಾದ ಪ್ರೊ. ಗಣೇಶ ಮೂರ್ತಿ ಅವರ ಸೇವೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರ ಕೊಡುಗೆಯನ್ನು ನೆನಪಿಸುವ ಮತ್ತು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯುಕ್ತ ಇಂದು ಕೋಣಂದೂರು ಸಮೀಪದ ಗರ್ತಿಕೆರೆಯ ಅಮೃತಾ ಗ್ರಾಮದಲ್ಲಿ ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು.
ಗರ್ತಿಕೆರೆಯ ಅವುಕ ಸರ್ಕಲ್ ಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಪ್ರೊ. ಗಣೇಶ್ ಮೂರ್ತಿ ಅವರ ಹೆಸರನ್ನು ನಾಮಕರಣ ಮಾಡಿದರು. ನಂತರ ಪ್ರೊ. ಗಣೇಶ್ ಮೂರ್ತಿ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ ಪುಷ್ಪಗಳನ್ನು ಅರ್ಪಿಸಿದರು.
ನಂತರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರ ಅನುದಾನದಲ್ಲಿ ಅಳವಡಿಸಲಾಗಿದ್ದ ನೂತನ ಹೈಮಾಸ್ಕ್ ದೀಪವನ್ನು ಉದ್ಘಾಟಿಸಿದರು.
ಅಮೃತಾ ಗ್ರಾಮದಲ್ಲಿರುವ ಪ್ರೊ. ಗಣೇಶ್ ಮೂರ್ತಿಯವರ ಜಮೀನಿನ ಶೈಲಾ ಫಾರಂನಲ್ಲಿ ಅವರ ಬದುಕಿನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರ ಸೇವೆಯನ್ನು ಸ್ಮರಿಸಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು .
ಈ ಕಾರ್ಯಕ್ರಮದಲ್ಲಿ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಹೊಸನಗರ ಕ್ಷೇತ್ರದ ಮಾಜಿ ಶಾಸಕರಾದ ಡಾ॥ ಜಿ. ಡಿ ನಾರಾಯಣಪ್ಪ , ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ( ಎನ್ಇಎಸ್ ) ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣಶೆಟ್ಟಿ ಯವರು ,ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಬಿದರಹಳ್ಳಿ ಪುರುಶೋತ್ತಮ್ ,ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಕೋಣಂದೂರು ನ ಅಧ್ಯಕ್ಷರಾದ .ಜಿ .ಎಸ್. ನಾರಾಯಣರಾವ್,ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ,ಗರ್ತಿಕೆರೆ ಗ್ರಾಪಂ ಸದಸ್ಯರಾದ ಸಚಿನ್ ಗೌಡ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮತ್ತು ಕುಟುಂಬವರ್ಗದವರು ಶಿಷ್ಯವರ್ಗ ಮತ್ತು ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್