Headlines

ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ರವರಿಗೆ ಆಹ್ವಾನ :

ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ.

2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕೀರ್ಣವನ್ನು ಸಹ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಭಾಗವಹಿಸುತ್ತಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯವಾಗಿದೆ.

Leave a Reply

Your email address will not be published. Required fields are marked *