Categories: Blog

ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಬಿಜೆಪಿ ಪಕ್ಷ ಸದೃಢವಾಗಿದ್ದು ಅಭಿವೃದ್ದಿ ಕಾರ್ಯದಲ್ಲಿ ಈ ಹಿಂದಿನ ಸರ್ಕಾರಗಳು ಮಾಡಲಾಗದಷ್ಟು ಅಭಿವೃದ್ದಿಯನ್ನು ಕೇವಲ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ. ಎಲ್ಲ ಸಮುದಾಯದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ರಿಪ್ಪನ್ ಪೇಟೆ ಹೋಬಳಿಯ ಬೂತ್ ನ ಅಧ್ಯಕ್ಷರುಗಳಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡಿದ ಅವರು ಬಿಜೆಪಿಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ ಸಂಗತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೊತೆಗೆ ಪಕ್ಷದ ಸಂಪರ್ಕವನ್ನು ಸಾಧಿಸುವ ಬೂತ್ ಕಾರ್ಯಕರ್ತರ ಪರಿಶ್ರಮಗಳೇ ಸಂಘಟನೆಯ ಆಧಾರ. ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಒಂದು ವೈಶಿಷ್ಟ್ಯಪೂರ್ಣವಾದ ಯೋಜನೆಯಂತೆ ಬೂತ್ ಅಧ್ಯಕ್ಷರ ನಾಯಕತ್ವದ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಈ ನಾಮಫಲಕ ಅನಾವರಣ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ,ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷವೇ ಹೊರತು ಯಾವುದೇ ಮನೆತನ ಅಥವಾ ಜನಾಂಗದ ಪಕ್ಷವಲ್ಲ ಎಂದರು.
ರಿಪ್ಪನ್ ಪೇಟೆ ವ್ಯಾಪ್ತಿಯ ಬೂತ್ ಅಧ್ಯಕ್ಷರುಗಳಾದ ಕಳಸೆ ರಾಜಕುಮಾರ್, ಗಾಜಿನಗೋಡು ನಾಗರಾಜ್, ಗೋಪಾಲ ಶಬರೀಶ್‌ನಗರ, ರಾಮಚಂದ್ರ, ರಾಘವೇಂದ್ರ, ವಿಷ್ಣುಮೂರ್ತಿ, ಈಶ್ವರರಾವ್, ಸುಧೀರ್ ಎಂ.ಕೆ.ನಾಗಭೂಷಣ, ಬಿ.ಎಸ್.ಸುಬ್ರಹ್ಮಣ್ಯ ಅರಸಾಳು, ಗುಂಡೋಜಿ ತಮ್ಮಡಿಕೊಪ್ಪ, ಕೊಳವಂಕ ನಾರಾಯಣಪ್ಪ, ವಿಶ್ವನಾಥ, ಈರಪ್ಪಶೇಟ್ ರವರಿಗೆ ಶಾಸಕ ಹರತಾಳು ಹಾಲಪ್ಪ ನಾಮಫಲಕವನ್ನು ಹಸ್ತಾಂತರಿಸಿದರು.
ಬಿಜೆಪಿ ತಾಲ್ಲೂಕ್ ಅಧ್ಯಕ್ಷ ಗಣಪತಿ ಬೆಳಗೋಡು,ಮುಖಂಡರುಗಳಾದ ಎಂ.ಬಿ.ಮಂಜುನಾಥ್, ವೀರೇಶ್ ಆಲವಳ್ಳಿ, ಎ.ಟಿ.ನಾಗರತ್ನ, ಆರ್.ಟಿ.ಗೋಪಾಲ್, ಎಂ.ಸುರೇಶ್‌ಸಿಂಗ್, ದೇವೇಂದ್ರಪ್ಪಗೌಡ ನೆವಟೂರು, ಎನ್.ಸತೀಶ್, ಕೆ.ಬಿ.ಹೂವಪ್ಪ, ಮೆಣಸೆ ಆನಂದ, ಕೃಷ್ಣೋಜಿರಾವ್, ಸುಂದರೇಶ್, ಸುಧೀಂದ್ರ ಪೂಜಾರಿ ಪಕ್ಷದ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

50 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago