Categories: Blog

ಭದ್ರಾವತಿ ನಗರಸಭೆ: ಜೆಡಿಎಸ್​​ ಅಭ್ಯರ್ಥಿಗೆ ಭರ್ಜರಿ ಗೆಲುವು, ಠೇವಣಿ ಕಳೆದುಕೊಂಡ ಬಿಜೆಪಿ

ಭದ್ರಾವತಿ : ಇಲ್ಲಿನ ನಗರಸಭೆ 29ನೇ ವಾರ್ಡ್‌ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.


450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆ ಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ.
ಜೆಡಿಎಸ್​ನ ನಾಗರತ್ನ ಅನಿಲ್‌ ಕುಮಾರ್ 1,282 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ರಮಾ ವೆಂಕಟೇಶ್‌ ಕೇವಲ 70 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಚುನಾವಣೆಯಲ್ಲಿ 16 ನೋಟಾ ಮತಗಳು ಚಲಾವಣೆಯಾಗಿವೆ.

ಯಾವ್ಯಾವ ಬೂತ್’ನಲ್ಲಿ ಯಾರಿಗೆಷ್ಟು ಮತ:

29ನೇ ವಾರ್ಡ್’ನಲ್ಲಿ ನಾಲ್ಕು ಬೂತ್’ಗಳಿದ್ದವು. ಬೂತ್ ನಂಬರ್ 111ರಲ್ಲಿ ಜೆಡಿಎಸ್ 243, ಕಾಂಗ್ರೆಸ್ 143, ಬಿಜೆಪಿ 15 ಮತ ಪಡೆದಿದೆ. ಇಲ್ಲಿ ಒಟ್ಟು 402 ಮತಗಳು ಚಲಾವಣೆಯಾಗಿತ್ತು. ಇನ್ನು ಬೂತ್ 112ರಲ್ಲಿ 420 ಮತ ಚಲಾವಣೆಯಾಗಿತ್ತು. ಈ ಪೈಕಿ ಜೆಡಿಎಸ್ 211, ಕಾಂಗ್ರೆಸ್ 195, ಬಿಜೆಪಿ 10 ಮತ ಪಡೆದಿವೆ. ಬೂತ್ 113ರಲ್ಲಿ 737 ಮತಗಳು ಚಲಾವಣೆಯಾಗಿದ್ದು, ಜೆಡಿಎಸ್ 485, ಕಾಂಗ್ರೆಸ್ 237, ಬಿಜೆಪಿ 12 ಮತಗಳು ಪಡೆದಿವೆ. ಬೂತ್ 114ರಲ್ಲಿ 641 ಮತಗಳು ಚಲಾವಣೆಯಾಗಿದ್ದವು. ಜೆಡಿಎಸ್ 343 ಕಾಂಗ್ರೆಸ್ 257, ಬಿಜೆಪಿ 33 ಮತ ಗಳಿಸಿದೆ.

16 ನೋಟಾ ಓಟ್

ಜಿದ್ದಾಜಿದ್ದಿಯ ಕಣದಲ್ಲಿ ನೋಟಾ ಓಟುಗಳು ಕೂಡ ಚಲಾವಣೆಯಾಗಿದೆ. 16 ಮಂದಿ ನೋಟಾ ಮತಗಳನ್ನು ಚಲಾಯಿಸಿದ್ದಾರೆ. ಬೂತ್ ನಂಬರ್ 111ರಲ್ಲಿ 1, 112ರಲ್ಲಿ 4, 113ರಲ್ಲಿ 3, 114ರಲ್ಲಿ 8 ನೋಟಾ ಮತಗಳು ಚಲಾವಣೆಯಾಗಿದೆ.

ಪ್ರಾಬಲ್ಯ ಮೆರೆದ ಜೆಡಿಎಸ್::

29ನೇ ವಾರ್ಡ್’ನಲ್ಲಿ ಹಿಂದಿನಿಂದಲೂ ಜೆಡಿಎಸ್ ಪ್ರಾಬಲ್ಯವಿದೆ. ಈ ಚುನಾವಣೆಯ ಫಲಿತಾಂಶ ದಿನ್ನು ಪುನಃ ಸಾಬೀತುಪಡಿಸಿದೆ. ಈ ಹಿಂದೆ ಜೆಡಿಎಸ್ ಪಕ್ಷದ ಅನಿಲ್ ಕುಮಾರ್ ಅವರು ಈ ವಾರ್ಡ್’ನಿಂದ ಗದ್ದಿದ್ದರು. ಮೀಸಲಾತಿ ಬದಲಾದ ಹಿನ್ನೆಲೆ ಪತ್ನಿ ನಾಗರತ್ನ ಅವರನ್ನು ಕಣಕ್ಕಿಳಿಸಿದ್ದರು. ಈ ಭಾರಿಯೂ ಜನರು ಜೆಡಿಎಸ್ ಪರವಾಗಿ ಒಲವು ತೋರಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಗೆದ್ದ ಹಿನ್ನೆಲೆ, ಜೆಡಿಎಸ್ ಕಾರ್ಯಕರ್ತರು ದೇವೆಗೌಡ, ಕುಮಾರಸ್ವಾಮಿ, ಅಪ್ಪಾಜಿಗೌಡರ ಪರ ಘೋಷಣೆ ಕೂಗಿ ಸಂಭ್ರಮಾರಣೆ ಮಾಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago