Categories: Blog

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.

ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ ಲಿಂಗಾಯತರು ಒಂದೇ ಆಗಿದ್ದು ಸಮಾಜವನ್ನು ಒಡೆಯುವ ಕೆಲಸಕ್ಕೆ ಯಾರು ಕೈ ಹಾಕಬಾರದು.ಅಖಿಲಾ ಭಾರತ ವೀರಶೈವ ಮಹಸಭಾ ಹಾಗೂ ಸಮಾಜದ ಎಲ್ಲಾ ಮಠಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಮ್ಮ ಸಮಾಜದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕೆ ಹೊರತು ಹಳ್ಳಿ ಹಳ್ಳಿಗೆ ಭೇಟಿ ಕೊಟ್ಟು ಸಮಾಜ ಒಡೆಯುವ ಕೆಲಸಕ್ಕೆ ಕೈ ಹಾಕಬಾರದು.ಸಮಾಜ ಒಡೆಯುವ ಕೆಲಸಕ್ಕೆ ಈ ಹಿಂದೆ ಪ್ರಭಾವಿ ಸಚಿವರುಗಳಾದ ಎಂ ಬಿ ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಕೈ ಹಾಕಿ ಅವರ ಪರಿಸ್ಥಿತಿ ಏನಾಯ್ತು ಎಂದು ರಾಜ್ಯದ ಜನ ನೋಡಿದ್ದಾರೆ.
ಒಳಪಂಗಡಗಳನ್ನು ಒಂದುಗೂಡಿಸಿ ಎಲ್ಲರಿಗೂ 2 (ಎ) ಮೀಸಲಾತಿ ದೊರಕಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ, ಆದರೆ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿಯವರು ಜನರ ಮತ್ತು ಒಳಪಂಗಡಗಳ ಬಳಿಬಂದು ಜಾಗೃತ ಸಭೆ ನಡೆಸುವುದು ಅಗತ್ಯವಿಲ್ಲ. ಜಾಗೃತ ಸಭೆ ನಡೆಸುವುದೇ ಇದ್ದರೆ ಅಖಿಲಾ ಭಾರತ ವೀರಶೈವ ಮಹಸಭಾ ಹಾಗೂ ಸಮಾಜದ ಎಲ್ಲಾ ಮಠಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸಲಿ.ಅದನ್ನು ಬಿಟ್ಟು ಮಿಸಲಾತಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಸಣ್ಣಪುಟ್ಟ ಒಳಪಂಗಡವನ್ನು ಒಡೆಯುವ ಕೆಲಸ ಮಾಡುತ್ತಿರುವ ಶ್ರೀಗಳಿಗೆ ತಾಲ್ಲೂಕಿನಲ್ಲಿ  ಜಾಗೃತ ಸಭೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಈ ಸಂಧರ್ಭದಲ್ಲಿ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಪಂ ಸದಸ್ಯರಾದ ಸಚಿನ್ ಗೌಡ ಮುಖಂಡರಾದ ಮೆಣಸೆ ಆನಂದ್,ಸ್ವಾಮಿ ಗೌಡ,ಜಂಬಳ್ಳಿ ಗಿರೀಶ್,ಯೊಗೇಂದ್ರ ಗೌಡರು,ತೀರ್ಥೆಶ್,ದೇವೆಂದ್ರಪ್ಪ ಗೌಡರು,ರಾಜೇಂದ್ರ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

49 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago