Categories: Blog

ಮುಳುಗಡೆ ಸಂತ್ರಸ್ತರಿಗೆ ಹಲವು ದಶಕಗಳಿಂದ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರದ ವಿರುದ್ದ ಶರಾವತಿ ಚಳುವಳಿ : ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಶರಾವತಿ,ವರಾಹಿ,ಚಕ್ರ ಮತ್ತು ಸಾವೇಹಕ್ಲು ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಹೋರಾಟ ಸಮಿತಿಯ ವತಿಯಿಂದ ಹಲವಾರು ದಶಕಗಳಿಂದ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರವು ಕೂಡಲೇ ಅವರಿಗೆ ಪರಿಹಾರ ನೀಡಬೇಕೆಂದು ಮಾಜಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥ್ ಗೌಡ ಆಗ್ರಹಿಸಿದರು.

ಇಂದು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ 1962 ರಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಶರಾವತಿ ನದಿ ಪಾತ್ರದ 504 ಹಳ್ಳಿಗಳು ಮುಳುಗಡೆಯಾಗಿ ಇಪ್ಪತೈದು ಸಾವಿರ ಕುಟುಂಬಗಳ ಮೂರು ಲಕ್ಷ ರೈತರು ನಿರಾಶಿತರಾಗಿದ್ದು ಐದು ಸಾವಿರ ಹೆಕ್ಟೇರ್ ಕೃಷಿ ಭೂಮಿ ಮುಳುಗಡೆಯಾಗಿತ್ತು.
ಇಲ್ಲಿನ ರೈತ ಕುಟುಂಬಗಳು ಹೊಸನಗರ,ಸಾಗರ,ಶಿವಮೊಗ್ಗ, ಶಿಕಾರಿಪುರ, ಹೊಳೆಹೊನ್ನೂರು,ಭದ್ರಾವತಿ ಮತ್ತು ತೀರ್ಥಹಳ್ಳಿ ಭಾಗಗಳಲ್ಲಿ ಹೋಗಿ ನೆಲೆ ಕಂಡುಕೊಂಡರು. ಜಲಾಶಯಕ್ಕಾಗಿ ಮುಳುಗಡೆ ಸಂತ್ರಸ್ತರಾದ ಶರಾವತಿ,ಚಕ್ರಾ,ವರಾಹಿ,ಸಾವೇಹಕ್ಲು ಭಾಗದ ಸಾವಿರಾರು ರೈತರು ಶಿವಮೊಗ್ಗದ ತನಕ ಹಂಚಿಹೋದರು.
ಈ ಸಂತ್ರಸ್ತ ರೈತರಿಗೆ ಇಲ್ಲಿಯವರೆಗೂ ಸರ್ಕಾರ ನ್ಯಾಯಯುತ ಪರಿಹಾರ ನೀಡಿಲ್ಲ ತಕ್ಷಣವೇ ತಾಂತ್ರಿಕ ಸಮಸ್ಯೆ ಬಗೆಹರಿಸಿ ನ್ಯಾಯಬದ್ದ ಪರಿಹಾರವನ್ನು ನೀಡಬೇಕು.

ಸಂತ್ರಸ್ತರು ಉಳುಮೆ ಮಾಡುತ್ತಿರುವ ಕೃಷಿ ಭೂಮಿಯನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆಯವರು ಅಭಯಾರಣ್ಯ,ಅಕ್ರಮ ಭೂಕಬಳಿಕೆ ಕೇಸಿನ ಮೂಲಕ ದಬ್ಬಾಳಿಕೆ ಮಾಡುತ್ತಿದ್ದು ಇದು ನಿಲ್ಲಬೇಕು ಹಾಗೂ ಎಲ್ಲಾ ಮುಳುಗಡೆ ಸಂತ್ರಸ್ತರಿಗೆ ಮತ್ತು ಬಗರ್ ಹುಕುಂ ರೈತರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಸೆಪ್ಟೆಂಬರ್ 26 ರಿಂದ ಕಲ್ಲುಕೊಪ್ಪ ದಿಂದ ಹೊರಟು ಸೆಪ್ಟೆಂಬರ್ 28 ರ ವರೆಗೆ ತೀರ್ಥಹಳ್ಳಿಯ ತಾಲೂಕ್  ಕಛೇರಿಯ ತನಕ ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದರು.

ಈ ಸುದ್ದಿ ಗೋಷ್ಠಿಯಲ್ಲಿ ಎಂ ಎಂ ಪರಮೇಶ್,ಅಮೀರ್ ಹಂಜಾ,ಚಂದ್ರೇಶ್ ಎನ್ , ಆಸೀಪ್ ಭಾಷಾಸಾಬ್,ಮಧೂಸೂಧನ,ಗಣಪತಿ,ಮಳವಳ್ಳಿ ಮಂಜುನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

2 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

3 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

9 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago