ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ.
ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..?
-ಮೆರವಣಿಗೆ ಮಾಡುವುದಕ್ಕೆ ಕಡ್ಡಾಯವಾಗಿ ನಿಷೇಧ
-ಬೃಹತ್ ಗಣಪತಿ ಪ್ರತಿಷ್ಟಾಪನೆಗೆ ಅವಕಾಶವಿಲ್ಲ
-ಡಿಜೆ ಬಳಸುವುದಕ್ಕೆ ಅನುಮತಿ ಇಲ್ಲ
-ಸರಳವಾಗಿ ಗಣೇಶ ಹಬ್ಬ ಆಚರಣೆಗೆ ಅವಕಾಶ
-ಮನೋರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ
-ನಿಗದಿತ ಸ್ಥಳಗಳಲ್ಲಿ ಮಾತ್ರ ವಿಸರ್ಜನೆಗೆ ಅವಕಾಶ
-ಆರ್ಕೆಸ್ಟ್ರಾ, ಸಂಗೀತ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ
-5 ದಿನ ಮಾತ್ರ ಗಣೇಶೋತ್ಸವ ಆಚರಣೆಗೆ ಅವಕಾಶ
-ಸಾರ್ವಜನಿಕವಾಗಿ ಮೆರವಣಿಗೆ ಮಾಡುವಂತಿಲ್ಲ
-ಸಂಜೆ ಗಣೇಶೋತ್ಸವ ಮಾರ್ಗಸೂಚಿ ಬಿಡುಗಡೆ
-ಸಾರ್ವಜನಿಕ ಗಣೇಶೋತ್ಸವದಲ್ಲಿ 50 ಮಂದಿಗೆ ಅವಕಾಶ
-ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲಿ ಮಾತ್ರ ಗಣೇಶ ವಿಸರ್ಜನೆ
-ಬಿಬಿಎಂಪಿ ಸೂಚಿಸಿದ ಸ್ಥಳಗಳಲ್ಲಿ ಮಾತ್ರ ಗಣೇಶ ವಿಸರ್ಜನೆ
-ಗಲ್ಲಿಗೊಂದರಂತೆ ಗಣೇಶಮೂರ್ತಿ ಪ್ರತಿಷ್ಠಾಪನೆ ಇಲ್ಲ
-ಮನೆ, ದೇಗುಲಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ
-ಗಣೇಶೋತ್ಸವದಲ್ಲಿ ಜನಸಂದಣಿ ಸೇರುವಂತಿಲ್ಲ
-ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ