ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ ಪೆಟ್ಟಾದ ಪರಿಣಾಮ ರಿಪ್ಪನ್ ಪೇಟೆಯ ಸರ್ಕಾರಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗೆ ದಾಖಲಿಸಿ ಹೆಚ್ವಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ಕಳುಹಿಸಿಕೊಡಲಾಗಿದೆ.
ರಿಪ್ಪನ್ ಪೇಟೆ ವಾಸಿ ಮುಸ್ತಫಾ ಕೋಣಂದೂರಿನಲ್ಲಿ ಮೊಬೈಲ್ ಶಾಪ್ ನಡೆಸುತ್ತಿದ್ದು,ಶಾಪ್ ಮುಚ್ಚಿ ಮನೆಗೆ ಹಿಂತಿರುಗುವ ವೇಳೆ ಈ ದುರ್ಘಟನೆ ನಡೆದಿದೆ.
ಕಾರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್