ರಿಪ್ಪನ್ಪೇಟೆ: ನಬಾರ್ಡ್ ಮತ್ತು ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಅಶ್ರಯದಲ್ಲಿ ಕೆಂಚನಾಲ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಗಾದಿ ವಿನ್ಯಾಸ ಕುರಿತಾದ 15 ದಿನಗಳ ತರಬೇತಿ ಕಾರ್ಯಗಾರ ನಡೆಯಿತು.
ಈ ತರಬೇತಿ ಕಾರ್ಯಗಾರದಲ್ಲಿ ಪ್ರಬುದ್ದ ಸ್ವಸಹಾಯ ಸಂಘದ 35 ಮಹಿಳೆಯರಿಗೆ 15 ದಿನಗಳ ಕಾಲ ಗಾದಿ ವಿನ್ಯಾಸದ ಕುರಿತು ತರಬೇತಿ ನೀಡಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಶಿವಮೊಗ್ಗ ನಬಾರ್ಡ್ ಮುಖ್ಯಸ್ಥರಾದ ಬಿ ರವಿ ಯವರು ಗ್ರಾಮೀಣ ಪ್ರದೇಶದ ವಿದ್ಯಾವಂತ ಮಹಿಳೆಯರು ಸ್ವಾವಲಂಬಿ ಬದುಕಿಗೆ ನಮ್ಮ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.
ಈ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೆಂಚನಾಲ ಗ್ರಾಮಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ವಹಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿ ಮಹಿಳೆಯರು ಸ್ವಾವಲಂಬಿ ಬದುಕಿಗಾಗಿ ಬ್ಯಾಂಕ್ ಆರ್ಥಿಕ ನೆರವು ನೀಡುವ ಮೂಲಕ ಕುಶಲ ಕೌಶಲ್ಯಾಭಿವೃದ್ದಿಗೆ ಸಹಕರಿಸುವಂತೆ ಕರೆ ನೀಡಿದರು.
::ಕಾರ್ಯಗಾರದಲ್ಲಿ ತಯಾರಿಸಿದ್ದ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.::
ಈ ಸಂದರ್ಭದಲ್ಲಿ ಕೆಂಚನಾಲ ಗ್ರಾಪಂ ಉಪಾಧ್ಯಕ್ಷರಾದ ಪುಟ್ಟಮ್ಮ,ಸಂಪನ್ಮೂಲ ವ್ಯಕ್ತಿಯಾದ ಎಂ ಪಿ ರೋಹಿಣಿ ಗ್ರಾಪಂ ಸದಸ್ಯರುಗಳಾದ ಮಹಮ್ಮದ್ ಷರೀಪ್ ಸಾಬ್,ಲಕ್ಷ್ಮಮ್ಮ,ಕೃಷ್ಣೋಜಿರಾವ್,ಹೂವಮ್ಮ ಹಾಗೂ ಗ್ರಾಪಂ ಕಾರ್ಯದರ್ಶಿಗಳಾದ ಶಿವಪ್ರಸಾದ್ ಎನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್