ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ.
ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು.
ಆಸೀಫ಼್ ಭಾಷಾಸಾಬ್ ರವರು ಎರಡು ಅವಧಿಗೆ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಹಲವಾರು ಸಂಘ ಸಂಸ್ಥೆಗಳಲ್ಲಿ ಉತ್ಸಾಹದಿಂದ ಸೇವೆ ಸಲ್ಲಿಸುತ್ತಿದ್ದಾರೆ.ಯುವ ಮುಖಂಡರಾಗಿ ಉತ್ತಮ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ.
ಪಕ್ಷ ಹೇಳಿದ ಎಲ್ಲಾ ಸಂಘಟನಾತ್ಮಕ ಕೆಲಸಗಳನ್ನು ಹಾಗೂ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿಯೂ ಆಸೀಫ಼್ ಭಾಷಾಸಾಬ್ ಅವರು ಮುಂಚೂಣಿಯಲ್ಲಿದ್ದಾರೆ.
ಈ ಪದಗ್ರಹಣ ಹಾಗೂ ಜವಾಬ್ದಾರಿ ಹಂಚಿಕೆ ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ,ಸಾಗರ ತಾಪಂ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಕ್ರೆ, ಜಿಪಂ ಮಾಜಿ ಸದಸ್ಯರಾದ ಶ್ವೇತಾ ಬಂಡಿ, ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್,ಕಾಂಗ್ರೆಸ್ ಮುಖಂಡರಾದ ಸದಾಶಿವ ಶೆಟ್ಟಿ, ಏರಿಗೆ ಉಮೇಶ್,ಚಂದ್ರಮೌಳಿ, ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಮಧುಸೂದನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್