ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ ಯುವಕರು ಪಡೆದುಕೊಳ್ಳಬೇಕು. ಯುವ ಶಕ್ತಿಯೇ ರಾಷ್ಟ್ರದ ಶಕ್ತಿ, ಯುವಜನತೆ ಸದೃಢರಾದರೆ ದೇಶವು ಎಂದಿಗೂ ಸದೃಢ.ದೇಶದ ಜನ ದೇಹವನ್ನು ಬಲಿಷ್ಠವಾಗಿ ಹಾಗು ಆರೋಗ್ಯಕರವಾಗಿ ಇದ್ದರೆ ಯಾವ ಅರೋಗ್ಯದ ಸಮಸ್ಯೆ ಇಲ್ಲದೆ ಬದುಕಬಹುದು ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯನ್ನು ದೇಶದ ಮಾದರಿ ಜಿಲ್ಲೆಯನ್ನಾಗಿ ಮಾಡಲು ಪಣತೊಡುವುದಾಗಿ ಹಾಗು ಅಂತರ್ ರಾಷ್ಟ್ರೀಯಮಟ್ಟದ ಮಾದರಿಯಲ್ಲಿ ಅಭಿವೃದ್ಧಿಗೊಳಿಸುವುದಾಗಿ ತಿಳಿಸಿದರು. ಕೇಂದ್ರದಿಂದ ಶಿವಮೊಗ್ಗ ಜಿಲ್ಲೆಗೆ ತನ್ನ ಶಕ್ತಿಮೀರಿ ಅನುದಾನವನ್ನು ತರುತಿರುವುದಾಗಿ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.
ಉದ್ಘಾಟನೆಯಲ್ಲಿ ಅಂತಾರಾಷ್ಟ್ರೀಯ ಜುಡೋ ಕ್ರೀಡಾಪಟು ಅವಿನಾಶ್ ವಾಚ್ಯನಾಯ್ಕ್. ರಾಮಾನಾಯ್ಕ್. ಹಾಲಪ್ಪ. ಮೋಹನ್, ಬೆಣ್ಣೆ ದೇವೇಂದ್ರಪ್ಪ. ಯುವ ಸಬಲೀಕರಣ ಮಂಜುನಾಥ್. ಪುರಸಭೆ ಅಧ್ಯಕ್ಷ ಲಕ್ಷ್ಮಿ ಮಾಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್