ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.
ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ.
ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರು ಊರುಗಡೂರು ಮತ್ತು ಸೂಳೆಬೈಲಿನವರು ಎಂದು ತಿಳಿದು ಬಂದಿದೆ.
ಪ್ಲಂಬರ್ ಕೆಲಸ ಮಾಡುತ್ತಿದ್ದ ಶೇಖ್ ಅಹಮದ್, ಮೊಹಮದ್ ಮುಸ್ತಫಾ, ಪೇಂಟರ್ ಅಲ್ಲಾಭಕ್ಷಿ ಬಂಧಿತರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ರಾಹಿಲ್, ಕುರಂ, ತಾಸೀರ್, ಮಾಡ್ಲರ್ ಶಾರೂ ಎಸ್ಕೇಪ್ ಆಗಿದ್ದಾರೆ. ಇವರ ಪತ್ತೆಗೆ ಕಾರ್ಯಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಬಂಧಿತರಿಂದ ಪೊಲೀಸರು ಎರಡು ಕೆಜಿ 120 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ ಸುಮಾರು 80 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಘಟನೆಗೆ ಬಳಕೆ ಮಾಡಿಕೊಂಡಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ದೀಪಕ್, ಸಿಬ್ಬಂದಿಗಳಾದ ಅರುಣ್ ಕುಮಾರ್, ಸಂದೀಪ್, ಕಾಂತರಾಜು, ರಾಜೇಗೌಡ ಪಾಟೀಲ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
*ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..*