ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗು ಜೀವನೋಪಾಯ ಇಲಾಖೆ, ಶ್ರೀಕಲಾ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಸಹಯೋಗದಲ್ಲಿ ಆರು ತಿಂಗಳ ಅವಧಿಯ ಉಚಿತ “ಅಸಿಸ್ಟೆಂಟ್ ಫ್ಯಾಷನ್ ಡಿಸೈನರ್ ತರಬೇತಿಗಾಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರುವ ಅರ್ಹರನ್ನು ಮಾತ್ರ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಲಾಗುವುದು. ಹದಿನೆಂಟು ವರ್ಷ ಮೇಲ್ಪಟ್ಟು ಮೂವತ್ತೈದು ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ನಂತರ ಶಿಕ್ಷಣಾರ್ಥಿಗಳಿಗೆ ಉದ್ಯೋಗಾವಕಾಶ-ಬ್ಯಾಂಕ್ ಆರ್ಥಿಕನೆರವು ಪಡೆಯಲು ಅನುಕೂಲವಾಗುವಂತೆ ರಾಜ್ಯ ಸರ್ಕಾರದ ಪ್ರಮಾಣಪತ್ರ ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ಎರಡು ಪಾಸ್‌ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಎಸ್.ಎಸ್.ಎಲ್.ಸಿ. ವಿದ್ಯಾಭ್ಯಾಸದ ಪ್ರಮಾಣಪತ್ರ ಹಾಗು ಜಾತಿ-ವರಮಾನ ಪ್ರಮಾಣಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಕಂಡಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು,
ಶ್ರೀ ಕಲಾ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ, ಒಂದನೆ ಮಹಡಿ ನಿವೃತ್ತ ನೌಕರರ ಭವನ ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ, ಪ್ರೆಸ್‌ಕ್ಲಬ್ ಎದುರು, ಆರ್.ಐ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ-577201 ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: 9448127813, 9448143165 ಸಂಪರ್ಕಿಸಿ.