ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು.
ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ.
ಜಿಲ್ಲೆಯ ಸುಮಾರು 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆರೋಗ್ಯ ಇಲಾಖೆ ಪ್ರತಿ ಲಸಿಕಾ ಕೇಂದ್ರಕ್ಕೆ 4 ಜನರಂತೆ 1600 ಸಿಬ್ಬಂದಿ ನಿಯೋಜನೆ ಮಾಡಿದೆ.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲೂ ಲಸಿಕಾ ಕೇಂದ್ರ ನಿಯೋಜನೆ ಮಾಡಲಾಗಿದ್ದು, ಪ್ರತಿ ಕೇಂದ್ರಕ್ಕೆ 250 ರಿಂದ 300 ಡೋಸ್ ಗಳನ್ನು ಆರೋಗ್ಯ ಇಲಾಖೆ ನೀಡಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 34 ಕಡೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಪ್ರತಿ ಕೇಂದ್ರದಲ್ಲೂ ತಲಾ 300 ಜನರಿಗೆ ವ್ಯಾಕ್ಸಿನ್ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಜೊತೆಗೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ
ಕೇಂದ್ರದಲ್ಲೂ ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ.