ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಆಚರಿಸಲಾಯಿತು.
ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು.
ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ ಮೂಲಕ ಯುವ ಜನತೆಯ ಸ್ವಾಭಿಮಾನ
ಕೆಣಕಿದ್ದರು.ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ..ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಮುಚ್ಚುತ್ತಾ.ಉದ್ಯೋಗಿಗಳನ್ನೂ ನಿರುದ್ಯೋಗಿಗಳನ್ನಾಗಿ ಮಾಡಲಾಗುತ್ತಿದೆ.
ಕೋಟ್ಯಂತರ ಪದವೀಧರರು, ಸ್ನಾತಕೋತ್ತರ ಪದವೀಧರರು, ತಾಂತ್ರಿಕ ಪದವಿ ಪಡೆದವರು ಉದ್ಯೋಗವಿಲ್ಲದೇ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಯುವ ಕಾಂಗ್ರೆಸ್
ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಇಂದು ಮೋದಿ ಹಠಾವೋ ಉದ್ಯೋಗ್ ಬಚಾವೋ’ ಎಂಬ ಘೋಷಣೆಯೊಂದಿಗೆ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ್ರು,ಅಲ್ಪಸಂಖ್ಯಾತ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್, ನಿಯಾಲ್ ಮುಜೀಬ್ ಫೈರೋಜ್ ,ಅಕ್ಷರ್ ಕಾಂಗ್ರೆಸ್ ಪಕ್ಷದ ಮುಖಂಡರಾದ ಚಿರಂಜೀವಿ ಬಾಬು, ಶಿವಾನಂದ್, ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷರಾದ ಗಿರೀಶ್
ಯುವ ಕಾಂಗ್ರೆಸ್ ನ ಮುಖಂಡರಾದ ಮಧುಸೂದನ್,ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ವಿನಯ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಗಿರೀಶ್, ಸುರೇಶ್,ಪುರಲೆ ಮಂಜು
ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್