ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ.
ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.
ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ ಇಲಾಖೆಯವರು ಮರವನ್ನು ತೆರವು ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಇನ್ನು ಕಳೆದ ಮೂರ್ನಾಲ್ಕು ದಿನದಿಂದ ನಿರಂತ ಮಳೆಯಾಗುತ್ತಿದೆ. ಮರ ಬುಡಮೇಲಾಗಲು ಇದುವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್