ಶಿವಮೊಗ್ಗ : ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಕಾರಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಕವಚ ತೊಟ್ಟ ನಕಲಿ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು.
ರಾತ್ರೋರಾತ್ರಿ ಕಳ್ಳರ ಹಾಗೆ ದೇವಸ್ಥಾನವನ್ನು ಒಡೆಸಿದ್ದಾರೆ. ಅಲ್ಲಿ ಬಿಜೆಪಿ ಸಂಸದರಿದ್ದಾರೆ. ಸರ್ಕಾರವು ಇವರದ್ದೆ. ಆದರೆ ಅಧಿಕಾರಿಗಳು ದೇಗುಲ ಒಡೆಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಹಾಗಾದರೆ ಇದು ಯಾವ ರೀತಿಯ ಸರ್ಕಾರ ಎಂದು ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.
ದೇಗುಲ ಕೆಡವಿದಾಗ ಅಲ್ಲಿ ಪೂಜೆ ಮಾಡುತ್ತಿದ್ದ ಅರ್ಚಕರು ಕಣ್ಣೀರು ಹಾಕುತ್ತಿದ್ದರು. ಹಿಂದುತ್ವ ಅಂದರೆ ಇದೇನಾ ಎಂದು ಪ್ರಶ್ನಿಸಿದರು. ಹಿಂದೂ, ಕ್ರೈಸ್ತ, ಮುಸ್ಲಿಂ ಸೇರಿದಂತೆ ಯಾವುದೇ ಧಾರ್ಮಿಕ ಕೇಂದ್ರಗಳನ್ನು ಕೆಡವುವಾಗ ಪಕ್ಕದಲ್ಲೇ ಪುನರ್ ಸ್ಥಾಪನೆಗೆ ವ್ಯವಸ್ಥೆ ಮಾಡಬೇಕು ಎಂದರು.
ಈ ಹಿಂದೆ ಎಲ್ಲಾ ವಿಚಾರಕ್ಕೂ ಕೂಗಾಡುತ್ತಿದ್ದ ಶೋಭಾ ಕರಂದ್ಲಾಜೆ ಈಗ ಎಲ್ಲಿ ಹೋಗಿದ್ದಾರೆ. ಅವರ ಬಾಯಿ ಈಗ ಬಂದ್ ಆಗಿದೆಯಾ. ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಆದಾಗಲೂ ಬಾಯಿ ಬಿಡಲಿಲ್ಲ. ದೇಗುಲ ಕೆಡವಿದ ವಿಚಾರದಲ್ಲೂ ಅವರು ಮಾತಾಡಲಿಲ್ಲವೇಕೆ. ಚುನಾವಣೆ ಬಂದಾಗ ಮಾತ್ರ ಬಾಂಬ್ ಹಾಕುತ್ತಿದ್ದರು ಎಂದು ಟೀಕಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್