ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.
ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.
ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ ಸಂಘಟನೆ, ಬಲವರ್ಧನೆಯೇ ತಮ್ಮ ಪ್ರಮುಖ ಆದ್ಯತೆ ಎಂಬುದಾಗಿ ನಂಬಿದ್ದೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್