Headlines

ಸಾಕು ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ! ಶಿಕ್ಷಕಿಯಿಂದ ಬೆಳಕಿಗೆ ಬಂತು ಪ್ರಕರಣ

ತೀರ್ಥಹಳ್ಳಿ: ಸಾಕು ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ತಾಲೂಕಿನ ಗಬಡಿ ಗ್ರಾಮದಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಮಂಜುನಾಥ್ (36) ಹಾಗು ಮಂಜುನಾಥನ ಸಂಬಂಧಿ ಎದುರುಮನೆ ಯುವಕ ರಾಮು(43)
ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆಯ ವಿವರ:

ಮೊದಲ ಪತ್ನಿ ತೊರೆದಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ.ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ
ಬಾಲಕಿಯ ಮೇಲೆ ಕಣ್ಣು ಹಾಕಿದ ಮಂಜುನಾಥ್ ಪತ್ನಿ ಇಲ್ಲದ ಸಂದರ್ಭದಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲು ಶುರು ಮಾಡಿದ್ದ. ಇದಲ್ಲದೆ ಎದುರು  ಮಂಜುನಾಥನ
ಸಂಬಂಧಿಯಾದ ರಾಮು ಕೂಡ ಬಾಲಕಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ.
ಆರನೇ ತರಗತಿ ಓದುತ್ತಿರುವ ಬಾಲಕಿಯಲ್ಲಾದ ಬದಲಾವಣೆಯನ್ನು ಗಮನಿಸಿದ ಶಿಕ್ಷಕಿಗೆ ಅನುಮಾನ ಬಂದಿದೆ. ನಂತರ ಪ್ರಕರಣ ಬೆಳಕಿಗೆ
ಬಂದಿದೆ. ತಕ್ಷಣ ಅಲರ್ಟ್ ಆದ ಮಾಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಸದ್ಯ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಘಟನೆ ಕುರಿತಂತೆ ಮಾಳೂರು ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *