ಸಾಗರ : ಪಟ್ಟಣದ ಸಮೀಪದ ಆವಿನಹಳ್ಳಿ ಬಸ್ ನಿಲ್ದಾಣದ ಬಳಿ 30 ವರ್ಷದ ವ್ಯಕ್ತಿಯನ್ನು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ಸಾಗರ ಗ್ರಾಮಾಂತರ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನ ಮಾಡಿದ್ದು ಗೊತ್ತಾಗಿದೆ.
ಈ ವೇಳೆ ಆತನಿಂದ ಬಂಗಾರದ ಬಂಗಾರದ ಆಭರಣ,ಬೆಳ್ಳಿ,ನಗದು ಹಣ ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.ಆರೋಪಿಯಿಂದ ಒಟ್ಟು 4.71.660 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲಾ.ಎಸ್.ಪಿ ಲಕ್ಷ್ಮಿ ಪ್ರಸಾದ್ ಮತ್ತು ಹೆಚ್ಚುವರಿ ಎಸ್.ಪಿ ಶೇಖರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ಸಾಗರ ಉಪ ವಿಭಾಗದ ಡಿ.ವೈ.ಎಸ್.ಪಿ ವಿನಾಯಕ್ ಶೆಟಗೇರಿ ಸೂಚನೆ ಮೇರೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು.ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಗಿರೀಶ್,ಸಬ್ ಇನ್ಸ್ ಪೆಕ್ಟರ್ ಸುಜಾತ ಸಿಬ್ಬಂದಿಗಳಾದ ಶ್ರೀಧರ್,ಗಿರೀಶ್ ಬಾಬು,ಅಶೋಕ್,ಈರಯ್ಯ,ಪ್ರಕಾಶ್,ಮೇಘರಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ವರದಿ: ಪವನ್ ಕುಮಾರ್ ಕಠಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್