Categories: Blog

ಸಾಗರ : ಪಡವಗೋಡು ಬಂಗಾರಪ್ಪ ಇನ್ನಿಲ್ಲ!!

ಸಾಗರ : ಇಲ್ಲಿನ ಪಡವಗೋಡು ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಪಡವಗೋಡು ಗ್ರಾಮ ಪಂಚಾಯಿತಿಯ ಸದಸ್ಯರಾದ  ಪಡವಗೋಡು ಬಂಗಾರಪ್ಪ(ಬಂಗಾರಣ್ಣ) ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು.

ಎರಡು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಆದರೆ ರಕ್ತದೊತ್ತಡ ಹೆಚ್ಚಿರುವ ಕಾರಣ ಅಲ್ಲಿಯೇ ಒಳರೋಗಿಯಾಗಿ ದಾಖಲಾಗಲು ತಿಳಿಸಿದ್ದಾರೆ ತಕ್ಷಣದಲ್ಲಿ ‍ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲುಮಾಡಲು ಅವರ ಸ್ನೇಹಿತರು ಪ್ರಯತ್ನ ಪಟ್ಟಿರುತ್ತಾರೆ ಆದರೆ ನಿಮಾನ್ಸ್ ನಲ್ಲಿ ಅವರಿಗೆ ವೆಂಟಿಲೇಟರ್  ವ್ಯವಸ್ಥೆ ಸಿಗುವುದಿಲ್ಲ  ಹಾಗಾಗಿ ಬೆಂಗಳೂರಿನ ಸಾಗರ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಅಷ್ಟರಲ್ಲಿ ಸಮಯ ವ್ಯರ್ಥವಾಗಿ ಅವರು ಇಹಲೋಕ ತ್ಯಜಿಸಿದ್ದಾರೆಂದು ತಿಳಿದುಬಂದಿದೆ.

ಇವರ ಅಕಾಲಿಕ ನಿಧನಕ್ಕೆ ಗಣ್ಯರೆಲ್ಲಾ ಸಂತಾಪ ಸೂಚಿಸಿದ್ದಾರೆ.



ಪಡವಗೋಡು ಬಂಗಾರಪ್ಪ ರವರಿಗೆ ನಿಮಾನ್ಸ್ ನಲ್ಲಿ ವೆಂಟಿಲೇಟರ್ ಬೆಡ್ ದೊರೆಯದ ಹಿನ್ನಲೆಯಲ್ಲಿ ವಿಧಾನಸಭಾ ಕಲಾಪದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೆಂಡಾಮಂಡಲರಾಗಿದ್ದ ಶಾಸಕ ಹರತಾಳು ಹಾಲಪ್ಪ…


ಇಂದು ಬೆಳಿಗ್ಗೆ ವಿಧಾನಸಭಾ ಕಲಾಪದ ಶೂನ್ಯ ವೇಳೆಯಲ್ಲಿ  ಹರತಾಳು ಹಾಲಪ್ಪ ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ ಕುರಿತು ಸದನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
ವೆಂಟಿಲೇಟರ್ ಕೊರತೆಯಿಂದ ರಾಜ್ಯದಲ್ಲಿ ಅನೇಕ ಸಾವು ನೋವು ಆಗಿದೆ ಹಾಗೆಯೇ ನನ್ನ ಪತ್ನಿಯ ತಮ್ಮ ಮತ್ತು ಅಕ್ಕ ಕೂಡ ಮರಣಹೊಂದಿದರು.ಈಗ ಸಾಗರದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಡವಗೋಡು ಬಂಗಾರಪ್ಪ ಮೆದುಳು ಸಂಬಂದಿಸಿದ ಕಾಯಿಲೆ ಯಿಂದ ಬಳಲುತಿದ್ದು ಅವರಿಗೆ ಒಂದು ವೆಂಟಿಲೇಟರ್ ಕೊಡಲು ಅರೋಗ್ಯ ಸಚಿವರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ನಿಮ್ಹಾನ್ಸ್ ಡೈರೆಕ್ಟರ್ ಕರೆಯಿಸಿ ಅಗತ್ಯ ವೆಂಟಿಲೇಟರ್ ವ್ಯವಸ್ಥೆ ಮಾಡಲು ಅರೋಗ್ಯ ಸಚಿವರು ನಿರ್ದೇಶಿಸಬೇಕು ಹಾಗು ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ ಇರಬಾರದು ಅಗತ್ಯ ಇರುವಷ್ಟು ವೆಂಟಿಲೇಟರ್ ಖರೀದಿಸಬೇಕು ಎಂದು ಆರೋಗ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಆದರೆ ನಿಮಾನ್ಸ್ ನಿಂದ ಸಾಗರ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಪಡವಗೋಡು ಬಂಗಾರಪ್ಪ ರವರ ಪ್ರಾಣಪಕ್ಷಿ ಹಾರಿ ಹೋಗಿತ್ತು.


ವರದಿ : ಧರ್ಮರಾಜ್ ಜಿ ಸಾಗರ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

42 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago