Categories: Blog

ಸಾಗರ : ಮಹಿಳೆಗೆ ಅಮಿಷವೊಡ್ಡಿ ಮತಾಂತರಕ್ಕೆ ಯತ್ನ :ಇಬ್ಬರ ಬಂಧನ

ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ಮತಾಂತರಕ್ಕೆ ಯತ್ನಿಸಿದ್ದ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ತಾಲೂಕಿನ ತಾಳಗುಪ್ಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದ ಜೋಗ್‌ಫಾಲ್ಸ್‌ನ ಅನಿಲ್ ಕುಮಾರ್ ಹಾಗೂ ಪತ್ನಿ ಪ್ರಶಾಂತಿ ಅವರನ್ನು ಬಂಧಿಸಲಾಗಿದೆ.

ಜ್ಯೋತಿ ಎಂಬುವವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರ ಮನೆಗೆ ಬಂದಿದ್ದ ಪ್ರಶಾಂತಿ ಮತ್ತು ಅನಿಲ್ ಕುಮಾರ್ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ.

ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ದಂಪತಿ ಈಗ ಜೈಲು ಸೇರಿದ್ದಾರೆ. ಈ ಘಟನೆ ಸಾಗರ ತಾಲ್ಲೂಕಿನ ತಾಳಗುಪ್ಪ ಗ್ರಾಮದಲ್ಲಿ ನಡೆದಿದೆ.

ಜಾತಿ, ಧರ್ಮ, ಮತಾಂತರ ಎಂಬ ಪಿಡುಗು ಜನರ ಮನಸ್ಸಿನಿಂದ ಇನ್ನು ಹೋಗಿಲ್ಲ. ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ ದಂಪತಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ತಾಳಗುಪ್ಪ ಗ್ರಾಮದ ಜ್ಯೋತಿ ಅವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಆಕೆ ಒಬ್ಬರೇ ವಾಸಿಸುತ್ತಿದ್ದರು.

ಒಂಟಿಯಾಗಿದ್ದ ಜ್ಯೋತಿ ಜೊತೆಗೆ ಜೋಗ್‌ಫಾಲ್ಸ್‌ನ ನಿವಾಸಿಯಾದ ಪ್ರಶಾಂತಿ ಎಂಬ ಮಹಿಳೆಯ ಸ್ನೇಹ ಬೆಳೆಯುತ್ತೆ. ಮನೆಯಲ್ಲಿ ಒಬ್ಬಳೇ ಇದ್ದಿದ್ದನ್ನು ನೋಡಿ ಪ್ರಶಾಂತಿ ಹಾಗೂ ಆಕೆಯ ಪತಿ ಅನಿಲ್ ಕುಮಾರ್, ಜ್ಯೋತಿ ಅವರ ಮನೆಗೆ ಬಂದು ಕೆಲವು ಆಮಿಷಗಳನ್ನು ಒಡ್ಡಿ ಜ್ಯೋತಿ ಅವರಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದರು ಎಂದು ದೂರಲಾಗಿದೆ. ಇದೇ ಆರೋಪದಡಿ ಅನಿಲ್ ಕುಮಾರ್ ಹಾಗೂ ಈತನ ಪತ್ನಿ ಪ್ರಶಾಂತಿ ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಕೋರ್ಟ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

40 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago