Categories: Blog

ಸಾಗರ : ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಇಬ್ಬರು ಯುವಕರ ಆತ್ಮಹತ್ಯೆ :

ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಜೀವತೆತ್ತ ಯುವಕರು.

ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ 8-30ಕ್ಕೆ ರೂಮ್‌ಬಾಯ್ ಊಟ ಬೇಕೆಂದು ಕೇಳಲು ಬಾಗಿಲು ಬಡಿದಾಗಲೂ ಇಬ್ಬರೂ ಹೊರಗೆ ಬಂದಿರಲಿಲ್ಲ. ರೂಮ್‌ಬಾಯ್ ಇಬ್ಬರೂ ಮಲಗಿರಬೇಕು ಎಂದು ವಾಪಾಸ್ ಹೋಗಿದ್ದನು.

ಭಾನುವಾರ ಬೆಳಿಗ್ಗೆ ರೂಮಿನ ಬಾಗಿಲು ಸಾಕಷ್ಟು ಬಾರಿ ಬಡಿದಾಗಲೂ ಬಾಗಿಲು ತೆರೆಯಲಿಲ್ಲ. ಇದರಿಂದ ಅನುಮಾನಗೊಂಡು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ರೂಮಿನ ಬಾಗಿಲು ಒಡೆದು ನೋಡಿದಾಗ ಇಬ್ಬರೂ ರೂಮಿನ ಸೀಲಿಂಗ್‌ಗೆ ಅಳವಡಿಸಿದ್ದ ಎರಡು ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ.

ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

4 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago