Categories: Blog

ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ರಿಪ್ಪನ್ ಪೇಟೆಯ ವಿವಿಧ ಸಂಘಟನೆಗಳಿಂದ ಬೆಂಬಲ :

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ  ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ವಿವಿಧ ಸಂಘ ಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು .


ಪಟ್ಟಣದ ಗ್ರಾಮ ಪಂಚಾಯತಿಯ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದ ಕೃಷಿ ವಿರೋಧಿ ಶಾಸನ ಮತ್ತು ರಾಜ್ಯದ ಎಪಿಎಂಸಿ ತಿದ್ದುಪಡಿಯ ಶಾಸನದಿಂದ ರಾಷ್ಟ್ರದ ರೈತರು ಸಂಕಷ್ಟದಲ್ಲಿ ಸಿಲುಕಲಿದ್ದಾರೆ.ಕೃಷಿ ವಿರೋಧಿ ಶಾಸನ ಮತ್ತು ಎಪಿಎಂಸಿ ತಿದ್ದುಪಡಿ ರದ್ದುಪಡಿಸಬೇಕೆಂದು ದೇಶದ 500 ಕ್ಕೂ ಅಧಿಕ ವಿವಿಧ ಸಂಘಟನೆಗಳಿಂದ ಕೂಡಿದ ಸಂಯುಕ್ತ ಕಿಸಾನ್ ಮೋರ್ಚಾ ಮೂಲಕ ಕಳೆದ ಕೆಲವು ತಿಂಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು ಸಹ ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಮನ್ನಣೆ ನೀಡದೇ ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನಲೆಯಲ್ಲಿ ದೇಶದ ರೈತ ಸಂಘಟನೆಗಳು ಸೆಪ್ಟೆಂಬರ್27 ಕ್ಕೆ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಎಲ್ಲಾ ಸಂಘ ಸಂಸ್ಥೆಗಳೊಂದಿಗೆ ಹಾಗೂ ಆಡಳಿತ  ಪಕ್ಷ ಹೊರತುಪಡಿಸಿ ಇನ್ನುಳಿದ ಎಲ್ಲಾ ಪಕ್ಷಗಳ ಸಹಕಾರದೊಂದಿಗೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುತ್ತಿದೆ ಇದಕ್ಕೆ ರೈತರು ಕೃಷಿ ಕಾರ್ಮಿಕರು,ಕೂಲಿ ಕಾರ್ಮಿಕರು ಹೊಟೇಲ್, ಅಂಗಡಿ ಮಾಲೀಕರುಗಳು ಹಾಗೂ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಹೊಸನಗರ ಜನಪರ ವೇದಿಕೆಯ ಅಧ್ಯಕ್ಷ ಆರ್ ಎನ್ ಮಂಜುನಾಥ್ ಮಾತನಾಡಿ ಕೇಂದ್ರದ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮಧ್ಯಮ ವರ್ಗ ಹಾಗೂ ಬಡವರ್ಗದ ಜನರ ಮೇಲೆ ಆರ್ಥಿಕ ದೌರ್ಜನ್ಯ ಮಾಡುತ್ತಿದ್ದು ಗ್ಯಾಸ್,ಪೆಟ್ರೋಲ್ ,ಡಿಸೇಲ್ ಬೆಲೆಗಳನ್ನು ಏರಿಸುವುದರ ಮೂಲಕ ದಿನ ಉಪಯೋಗಿ ವಸ್ತುಗಳ ಬೆಲೆ ಏರುವಂತೆ ಮಾಡಿದ್ದು ಇದರಿಂದ ಬಡವರು , ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಹಾಗೇಯೆ ಕೇಂದ್ರ ಸರ್ಕಾರ ಹೊಸ ಕೃಷಿ ನೀತಿ ಮತ್ತು ಎಪಿಎಂಸಿ ತಿದ್ದುಪಡಿ ರೈತರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಗಲ್ಲಿಗೇರಿಸುವಂತಹ ಶಾಸನವಾಗಿದ್ದು ಅವುಗಳನ್ನು ರದ್ದುಪಡಿಸಬೇಕೆಂದು ಹೊಸನಗರ ತಾಲೂಕ್ ಜನಪರ ವೇದಿಕೆ ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಪತ್ರೀಕಗೋಷ್ಟಿಯಲ್ಲಿ ರೈತ ಸಂಘದ ಸುಗಂಧರಾಜ್ ,ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಆರ್ ಎನ್ ಮಂಜಪ್ಪ,ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ,ಜೆಡಿಎಸ್ ಮುಖಂಡ ಮುಡುಬಾ ಧರ್ಮಪ್ಪ ,ಕಾಂಗ್ರೆಸ್ ಹಿರಿಯ ಮುಖಂಡ ಚಂದಾಳದಿಂಬ ಡಾಕಪ್ಪ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

18 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

21 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

22 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

23 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago