ಹಾರನಹಳ್ಳಿ : ಪಟ್ಟಣದ ವ್ಯಾಪ್ತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಏಳನೇ ತರಗತಿಯ ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಹದಿಹರೆಯದ ಬಾಲಕ, ಬಾಲಕಿಯರಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.