ಹೊಸನಗರ: ಕಳೆದೆರಡು ದಿನದಿಂದ ನಾಪತ್ತೆಯಾಗಿದ್ದ ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ಮಕ್ಬೂಲ್ ಅಹಮದ್ (31) ಎಂಬ ವ್ಯಕ್ತಿಯ ಶವ ಪಟ್ಟಣದ ಕಾಳಿಕಾಪುರ ಕನ್ನರ್ ಗುಂಡಿಯ ಹೊಳೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.
ಮಕ್ಬೂಲ್ ಅಹಮದ್ ಕಳೆದ ಎರಡು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದನು. ಕಳೆದ ಕೆಲವು ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು ಈತನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.
ಸ್ಥಳೀಯರ ಸಹಕಾರದಿಂದ ಶವವನ್ನು ದಡಕ್ಕೆ ತಲುಪಿಸಲಾಯಿತು.ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ದೇವರಾಜ್ ಆರಗ