Categories: Blog

ಹೊಸನಗರ : ಪಂಡಿತ್ ದೀನದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ

ಹೊಸನಗರ : ಇಂದು ಪಂಡಿತ್ ದಿನದಯಳ್ ಉಪಾಧ್ಯಾಯರ ಜಯಂತಿ ಯನ್ನು ತಾಲೂಕು   ಬಿಜೆಪಿ ಘಟಕ  ವತಿಯಿಂದ ಹೊಸನಗರ ರಿಪ್ಪನಪೇಟೆ ಹುಂಚ  ಮತ್ತು ನಗರ ದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು ಈ ಕಾರ್ಯಕ್ರಮವು  ಹೊಸನಗರ ತಾಲ್ಲೂಕಿನ ಎಲ್ಲಾ ಶಕ್ತಿ ಕೇಂದ್ರದಲ್ಲಿ ನಡೆಯಿತು ಮತ್ತು ಈ ಕಾರ್ಯಕ್ರಮವು ಪ್ರತಿ ಬೂತಿನಲ್ಲೂ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್ ಆರ್ ದೇವಾನಂದ್ ಪಂಡಿತ್ ದೀನದಯಾಳ ಉಪಾಧ್ಯಾಯರು ಒಬ್ಬ ಉದಾತ್ತ ಆದರ್ಶವ್ಯಕ್ತಿ ಮತ್ತು ಪ್ರಚಂಡ ಸಂಘಟನಾ ಸಾಮಾರ್ಥ್ಯವನ್ನು ಹೊಂದಿದ್ದವರಾಗಿದ್ದರು. ಅವರು ಕೇವಲ ವ್ಯಕ್ತಿಯಾಗಿರದೇ ಪ್ರತಿಯೊಂದು ರಂಗದಲ್ಲೂ ಅತ್ಯದ್ಭುತ ಪ್ರತಿಭೆಯನ್ನು ಹೊಂದಿದ್ದರು. ಅವರು ಸಾಮಾಜಿಕ ಚಿಂತಕ, ಅರ್ಥಶಾಸ್ತ್ರಜ್ಞ, ಶಿಕ್ಷಣತಜ್ಞ, ರಾಜಕಾರಣಿ, ಬರಹಗಾರ, ಪತ್ರಕರ್ತ, ವಾಗ್ಮಿ, ಸಂಘಟನ ಚತುರರು ಮುಂತಾದ ಹಲವು ಸರ್ವಶ್ರೇಷ್ಠ ಗುಣಗಳ ಆಕರವಾಗಿದ್ದರು ಎಂದರು.
ಈ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿಯನ್ನು ಕಾರ್ಯಕರ್ತರಿಗೆ ಬಿಡಿಸಲಾಯಿತು ಹಾಗೂ ಈ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಿದರು


ಈ ಕಾರ್ಯಕ್ರಮದಲ್ಲಿ ದೀನ ದಯಾಳ ಉಪಾಧ್ಯಾಯ ಜಯಂತಿಯ  ಸಂಚಾಲಕರಾದ R T ಗೋಪಾಲ್, ಹಿರೇಮಣತಿ ಶಿವಾನಂದ,ಮ್ಯಾಮ್ಕೋಸ್ ನಿರ್ದೇಶಕರಾದ K V ಕೃಷ್ಣಮೂರ್ತಿ, ನಗರ ಶಕ್ತಿ ಕೇಂದ್ರದ ಅಧ್ಯಕ್ಷರಾದ  N Y ಸುರೇಶ್, ನಗರ ಶಕ್ತಿ ಕೇಂದ್ರದ ಕಾರ್ಯದರ್ಶಿ ರಾಮಕಾಂತ್, ರಮೇಶ್, ಬಂಕ್ರಿಬಿಡು ಮಂಜುನಾಥ್, ಕೊಣೆಮನೆ  ಶಿವಕುಮಾರ್, ಶಕ್ತಿ ಕೇಂದ್ರ ಸಂಘಚಾಲಕರಾದ N ಸತೀಶ್, ಮಹಾ ಶಕ್ತಿ ಕೇಂದ್ರದ ಪ್ರಮುಖರಾದ ಮಂಜು ಪಟ್ಟಣ ಪಂಚಾಯಿತಿ ಸದಸ್ಯರು ಪಕ್ಷದ  ಕಾರ್ಯಕರ್ತರು ಭಾಗವಹಿಸಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

7 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago