ರಿಪ್ಪನ್ ಪೇಟೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಳಿ ಕ್ಷಮೆ ಕೋರದೆ ಇದ್ದರೆ ಬೇಳೂರು ವಿರುದ್ದ ಬಿಲ್ಲವ ಸಮಾಜದಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ :
ರಿಪ್ಪನ್ ಪೇಟೆ: ಸೊರಬದಲ್ಲಿ ಇತ್ತೀಚೆಗೆ ನಡೆದ ಈಡಿಗರ ಸಮುದಾಯದ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಮಾಜಿ ಶಾಸಕ ಗೋಪಾಲಕೃಷ್ಣ ಅವಹೇಳನಕಾರಿಯಾಗಿ ಮಾತನಾಡಿದ್ದು ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಕೆರೆಹಳ್ಳಿ ಹಾಗೂ ಹುಂಚಾ ಹೋಬಳಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜದ ಅಧ್ಯಕ್ಷರಾದ ಗರ್ತಿಕೆರೆ ಚಂದ್ರಪ್ಪ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಹೆಬ್ಬೆಟ್ಟು,ಅವರಿಗೆ ಯಾವುದೇ ವಿಧ್ಯಾಭ್ಯಾಸ ಇಲ್ಲ…