ಹೊಸನಗರ : ಪಂಡಿತ್ ದೀನದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ

 ಹೊಸನಗರ : ಇಂದು ಪಂಡಿತ್ ದಿನದಯಳ್ ಉಪಾಧ್ಯಾಯರ ಜಯಂತಿ ಯನ್ನು ತಾಲೂಕು   ಬಿಜೆಪಿ ಘಟಕ  ವತಿಯಿಂದ ಹೊಸನಗರ ರಿಪ್ಪನಪೇಟೆ ಹುಂಚ  ಮತ್ತು ನಗರ ದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು ಈ ಕಾರ್ಯಕ್ರಮವು  ಹೊಸನಗರ ತಾಲ್ಲೂಕಿನ ಎಲ್ಲಾ ಶಕ್ತಿ ಕೇಂದ್ರದಲ್ಲಿ ನಡೆಯಿತು ಮತ್ತು ಈ ಕಾರ್ಯಕ್ರಮವು ಪ್ರತಿ ಬೂತಿನಲ್ಲೂ ನಡೆಯಿತು.  ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್ ಆರ್ ದೇವಾನಂದ್ ಪಂಡಿತ್ ದೀನದಯಾಳ ಉಪಾಧ್ಯಾಯರು ಒಬ್ಬ ಉದಾತ್ತ ಆದರ್ಶವ್ಯಕ್ತಿ ಮತ್ತು ಪ್ರಚಂಡ ಸಂಘಟನಾ ಸಾಮಾರ್ಥ್ಯವನ್ನು ಹೊಂದಿದ್ದವರಾಗಿದ್ದರು. ಅವರು ಕೇವಲ ವ್ಯಕ್ತಿಯಾಗಿರದೇ ಪ್ರತಿಯೊಂದು ರಂಗದಲ್ಲೂ…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ. ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು. ಆಸೀಫ಼್…

Read More

ಆನಂದಪುರದಲ್ಲಿ ರಾಯಲ್ ಕ್ಲಬ್ ನಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅದ್ದೂರಿ ಸನ್ಮಾನ :

ಆನಂದಪುರ : ಅತ್ಯುನ್ನತ ಸಾಧನೆ ಗೈದು ಜನ ಸಾಮಾನ್ಯರಲ್ಲಿ ನೆನಪುಳಿಯುವಂತೆ  ಸಾಧನೆಗೈದ ಸನ್ಮಾನಿತರಿಗೆ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ರಾಯಲ್ ಕ್ಲಬ್ ವತಿಯಿಂದ ನಾಡಿನಾದ್ಯಂತ ಹೆಸರನ್ನು ಗಳಿಸಿ ನಾಡಿಗೆ ಕೀರ್ತಿ ತಂದ ಹಲವು ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ರಾಯಲ್ ಕ್ಲಬ್ ಕಳೆದ 2ವರ್ಷಗಳಿಂದ ಆನಂದಪುರದಲ್ಲಿ ಹಲವು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಹಾಗೂ ನೊಂದವರಿಗೆ ನೆರವು ನೀಡುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿದ್ದು ಸಮಾಜಮುಖಿ ಕೆಲಸ ನಿರ್ವಹಿಸುವತ್ತ ಗಮನ ಹರಿಸಿದೆ.  ರಾಯಲ್ ಎನ್ನುವ ಶಬ್ದದಲ್ಲೇ ಸರ್ವ ಧರ್ಮವನ್ನು…

Read More

ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ರಿಪ್ಪನ್ ಪೇಟೆಯ ವಿವಿಧ ಸಂಘಟನೆಗಳಿಂದ ಬೆಂಬಲ :

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ  ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ವಿವಿಧ ಸಂಘ ಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು . ಪಟ್ಟಣದ ಗ್ರಾಮ ಪಂಚಾಯತಿಯ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದ ಕೃಷಿ…

Read More

ರಿಪ್ಪನ್ ಪೇಟೆ:ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆ

ರಿಪ್ಪನ್ ಪೇಟೆ : ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆಯನ್ನು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನ ಮಾಡುವುದರ ಮೂಲಕ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ರಿಪ್ಪನ್ ಪೇಟೆ ಮತ್ತು ಹುಂಚ ಹೋಬಳಿಯ 42 ಬೂತ್ ಕೇಂದ್ರಗಳಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಎಂದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ…

Read More

ಮಂಜುನಾಥ ಗೌಡರೇ ಮೋಸಗಾರಿಕೆ ಇಲ್ಲಿಗೆ ನಿಲ್ಲಿಸಿ : ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ,ಸೆ.24- ಆರ್.ಎಂ.ಮಂಜುನಾಥ್ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮರುದಿನದಿಂದಲೇ ಗುಂಪುಗಾರಿಕೆ ಪ್ರಾರಂಭ ಮಾಡಿ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇವರನ್ನು ಪಕ್ಷದಿಂದ ಹೊರಹಾಕುವುದು ಅನಿವಾರ್ಯವಾಗಬಹುದು ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್.ಎಂ.ಮಂಜುನಾಥ್ ಗೌಡರು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘಟಕವನ್ನು ಕಡೆಗಣಿಸಿ ಪಕ್ಷದ ಮುಖಂಡರ ಫೋಟೋಗಳನ್ನು ಕರಪತ್ರದಲ್ಲಿ ಪ್ರಕಟಿಸಿ ಖಾಸಗಿಯಾಗಿ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್…

Read More

ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಸಾದಿಕ್ ಕೊಲೆ!

ಶಿವಮೊಗ್ಗ: ನಗರದ ಕಲ್ಲೂರು ಮಂಡ್ಲಿಯ ಸಮೀಪ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಮೃತ ದುರ್ದೈವಿ. ಕಲ್ಲೂರು ಮಂಡ್ಲಿಯ ತೋಟದಲ್ಲಿ  ಕೊಲೆ ನಡೆದಿರುವ ಸಾಧ್ಯತೆಯಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂದಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.  ತುಂಗಾನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.  

Read More

ಭಾರತ್ ಬಂದ್ ಗೆ ಶಿವಮೊಗ್ಗ ಸ್ಥಬ್ದವಾಗಲಿದೆ : ರೈತ ಸಂಘದ ಅಧ್ಯಕ್ಷ ಹೆಚ್ ಆರ್ ಬಸವರಾಜಪ್ಪ

ಶಿವಮೊಗ್ಗ : ಭಾರ‌ತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ, ಬಂದ್ ಯಶಸ್ವಿಗೊಳಿಸುವಲ್ಲಿ ಎಲ್ಲರೂ  ಸಹಕಾರ ನೀಡಬೇಕೆಂದು ಶಿವಮೊಗ್ಗದ ರೈತ  ಸಂಘದ ಅಧ್ಯಕ್ಷ  ಬಸವರಾಜಪ್ಪ  ತಿಳಿಸಿದರು. ಕೇಂದ್ರದ ಕೃಷಿ ಕಾಯ್ದೆಗಳನ್ನು ಮರಳಿ ಹಿಂಪಡೆಯುವಂತೆ  ಹಾಗೂ  ಸರ್ಕಾರಿ  ಕಂಪನಿಗಳನ್ನು  ಖಾಸಗೀಕರಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗವನ್ನು  ಸಹ ಬಂದ್ ಮಾಡಿ  ಬೆಂಬಲ  ಸೂಚಿಸಲಾಗುವುದು ಎಂದು ಗೌರವಾಧ್ಯಕ್ಷ ಹೆಚ್ ಬಸವರಾಜ್  ತಿಳಿಸಿದರು. ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ ಎಲ್ಲರೂ  ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಈ …

Read More

ಮುಳುಗಡೆ ಸಂತ್ರಸ್ತರಿಗೆ ಹಲವು ದಶಕಗಳಿಂದ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರದ ವಿರುದ್ದ ಶರಾವತಿ ಚಳುವಳಿ : ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಶರಾವತಿ,ವರಾಹಿ,ಚಕ್ರ ಮತ್ತು ಸಾವೇಹಕ್ಲು ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಹೋರಾಟ ಸಮಿತಿಯ ವತಿಯಿಂದ ಹಲವಾರು ದಶಕಗಳಿಂದ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರವು ಕೂಡಲೇ ಅವರಿಗೆ ಪರಿಹಾರ ನೀಡಬೇಕೆಂದು ಮಾಜಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥ್ ಗೌಡ ಆಗ್ರಹಿಸಿದರು. ಇಂದು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ 1962 ರಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಶರಾವತಿ ನದಿ ಪಾತ್ರದ 504 ಹಳ್ಳಿಗಳು ಮುಳುಗಡೆಯಾಗಿ ಇಪ್ಪತೈದು ಸಾವಿರ…

Read More

ಕ್ಯಾತಿನಕೊಪ್ಪ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಶಿವಮೊಗ್ಗ: ಕಳೆದೊಂದು ವಾರದಿಂದ ಶಿವಮೊಗ್ಗ ತಾಲೂಕಿನ ಕ್ಯಾತಿನಕೊಪ್ಪದ ತೋಟ ಹಾಗೂ ಮನೆಗಳ ಬಳಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸಮೀಪದಲ್ಲಿರುವ ತೋಟದ ಮನೆಯಲ್ಲಿ ಮಂಜುನಾಥ್ ಎಂಬವರ ಕುಟುಂಬ ವಾಸವಿದೆ. ಕಳೆದ ನಾಲ್ಕೈದು ದಿನದ ಹಿಂದೆ ಮಂಜುನಾಥ್ ಅವರ ಸಾಕು ನಾಯಿಯನ್ನು ಚಿರತೆ ಬೇಟೆ ಆಡಿದ್ದನ್ನು ಗಮನಿಸಿದ್ದರು. ಈ ಬಗ್ಗೆ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.  ಕಳೆದ ಐದು ದಿನದಿಂದ ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಅವರ ತೋಟದ ಮನೆ ಬಳಿ…

Read More