ಶಿವಮೊಗ್ಗ : ಸರಳವಾಗಿ ವಿಸರ್ಜನೆಗೊಂಡ ಇತಿಹಾಸ ಪ್ರಸಿದ್ಧ ಹಿಂದು ಮಹಾಸಭಾ ಗಣಪತಿ
ಶಿವಮೊಗ್ಗ: ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ಸುಮಾರು 12-45 ಕ್ಕೆ ದೇವಸ್ಥಾನದ ಬಳಿಯಿರುವ ತುಂಗ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಜನ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇದರಿಂದ 77 ನೇ ಹಿಂದೂ ಮಹಾಸಭಾ ಗಣಪತಿಯನ್ನು ವಿಸರ್ಜಿಸಲಾಗಿದೆ. 77 ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಒಟ್ಟು…