ಸೊರಬ : ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು :

ಸೊರಬ : ಕೆರೆಗೆ ಈಜಲು ಹೋಗಿ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೊರಬ ತಾಲೂಕಿನಲ್ಲಿ ಬುಧವಾರ ಸಂಜೆ ಐದು ಗಂಟೆ ಸುಮಾರಿಗೆ ನಡೆದಿದೆ. ತಾಲೂಕಿನ ಗೊಲ್ಲರಹಳ್ಳಿ ಕೆರೆಯಲ್ಲಿ ಈಜಲು ಹೋದ ಎಣ್ಣೆಕೊಪ್ಪ ನಿವಾಸಿ ರವಿನಾಯ್ಕ (35) ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸೊರಬ ಅಗ್ನಿಶಾಮಕ ದಳ ಸಿಬ್ಬಂದಿಗಳು ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದರು. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಗಳಾದ ನಾಗರಾಜ್…

Read More

ಶಿವಮೊಗ್ಗ : ನೌಕರಿ ಖಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ :

ಶಿವಮೊಗ್ಗ : ದೀರ್ಘಕಾಲದ  ಸೇವೆಯನ್ನು ಬಳಸಿಕೊಂಡ ಇಲಾಖೆಯು ಸೇವಾ ವಿಲೀನಗೊಳಿಸಿ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲೇಖ ಪತ್ರ 1ಮತ್ತು 2 ಅನುಸಾರ ದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆ ಮಾಡುವ ಬಗ್ಗೆ ಪರಿಶೀಲಿಸಿ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000ರಿಂದ 2021ರ ಅವಧಿಯ ವರೆಗೆ ನಿಯಮಾನುಸಾರವಾಗಿ ಆಯ್ಕೆಗೊಂಡ 14.564 ಅತಿಥಿ…

Read More

ಸಾಗರ : ಪಡವಗೋಡು ಬಂಗಾರಪ್ಪ ಇನ್ನಿಲ್ಲ!!

ಸಾಗರ : ಇಲ್ಲಿನ ಪಡವಗೋಡು ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಪಡವಗೋಡು ಗ್ರಾಮ ಪಂಚಾಯಿತಿಯ ಸದಸ್ಯರಾದ  ಪಡವಗೋಡು ಬಂಗಾರಪ್ಪ(ಬಂಗಾರಣ್ಣ) ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಆದರೆ ರಕ್ತದೊತ್ತಡ ಹೆಚ್ಚಿರುವ ಕಾರಣ ಅಲ್ಲಿಯೇ ಒಳರೋಗಿಯಾಗಿ ದಾಖಲಾಗಲು ತಿಳಿಸಿದ್ದಾರೆ ತಕ್ಷಣದಲ್ಲಿ ‍ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲುಮಾಡಲು ಅವರ ಸ್ನೇಹಿತರು ಪ್ರಯತ್ನ…

Read More

ಹೊಸನಗರ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಹೊಸನಗರ: ಕಳೆದೆರಡು ದಿನದಿಂದ ನಾಪತ್ತೆಯಾಗಿದ್ದ ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ಮಕ್ಬೂಲ್ ಅಹಮದ್ (31) ಎಂಬ ವ್ಯಕ್ತಿಯ ಶವ ಪಟ್ಟಣದ ಕಾಳಿಕಾಪುರ ಕನ್ನರ್ ಗುಂಡಿಯ ಹೊಳೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮಕ್ಬೂಲ್ ಅಹಮದ್ ಕಳೆದ ಎರಡು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದನು.  ಕಳೆದ ಕೆಲವು ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು ಈತನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.  ಸ್ಥಳೀಯರ ಸಹಕಾರದಿಂದ ಶವವನ್ನು ದಡಕ್ಕೆ ತಲುಪಿಸಲಾಯಿತು.ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ರಿಪ್ಪನ್ ಪೇಟೆ: ಪ್ರಬುದ್ದ ಸ್ವಸಹಾಯ ಸಂಘದ ಮಹಿಳೆಯರಿಗೆ ಗಾದಿ ವಿನ್ಯಾಸ ತರಬೇತಿ ಕಾರ್ಯಗಾರ

ರಿಪ್ಪನ್‌ಪೇಟೆ: ನಬಾರ್ಡ್ ಮತ್ತು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಅಶ್ರಯದಲ್ಲಿ ಕೆಂಚನಾಲ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಗಾದಿ ವಿನ್ಯಾಸ ಕುರಿತಾದ 15 ದಿನಗಳ ತರಬೇತಿ ಕಾರ್ಯಗಾರ ನಡೆಯಿತು. ಈ ತರಬೇತಿ ಕಾರ್ಯಗಾರದಲ್ಲಿ ಪ್ರಬುದ್ದ ಸ್ವಸಹಾಯ ಸಂಘದ 35 ಮಹಿಳೆಯರಿಗೆ 15 ದಿನಗಳ ಕಾಲ ಗಾದಿ ವಿನ್ಯಾಸದ ಕುರಿತು ತರಬೇತಿ ನೀಡಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಶಿವಮೊಗ್ಗ ನಬಾರ್ಡ್ ಮುಖ್ಯಸ್ಥರಾದ ಬಿ ರವಿ ಯವರು ಗ್ರಾಮೀಣ ಪ್ರದೇಶದ…

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ

ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ‌.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…

Read More

ರಿಪ್ಪನ್ ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನರ್ ನಾಮಕರಣಗೊಳಿಸುವಂತೆ ಆಗ್ರಹಿಸಿ 30 ಗ್ರಾಮಗಳಲ್ಲಿ ಸಾರ್ವಜನಿಕ ಸಹಿ ಸಂಗ್ರಹಣ ಅಭಿಯಾನಕ್ಕೆ ರಿಪ್ಪನ್‌ಪೇಟೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಮತ್ತು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಇಂದು ಸಾರ್ವಜನಿಕರ ಸಹಿ ಸಂಗ್ರಹಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಯಿಂದ ತಾಲೂಕಿನ ಅಭಿವೃದ್ದಿ ಮಾಡಲು ಸಾಧ್ಯವಾಗುತ್ತದೆ.ಒಂದು ತಾಲೂಕ್ಕಿಗೆ ಇಬ್ಬಿಬ್ಬರು ಶಾಸಕರಾಗಿ ಅಭಿವೃದ್ಧಿ ಕಾರ್ಯಗಳು ಕನಸಿನ ಮಾತಾಗಿದೆ.ನಮ್ಮ ತಾಲೂಕ್ಕಿಗೆ ವಿಧಾನಸಭಾ ಕ್ಷೇತ್ರ ಕೇಳುವುದು ನಮ್ಮ ಹಕ್ಕು…

Read More

ರಿಪ್ಪನ್ ಪೇಟೆ : ಕಳಪೆ ಚರಂಡಿ ಕಾಮಗಾರಿ,ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬರುವೆ ಶಾಲೆಯ ಮುಂಭಾಗದ ರಸ್ತೆ

ರಿಪ್ಪನ್ ಪೇಟೆ: ಇಲ್ಲಿನ ಚೌಡೇಶ್ವರಿ ಬೀದಿಯ ಬರುವೆ ಶಾಲೆಯ ಮುಂಭಾಗ 2018 ರಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಿರ್ಮಿಸಿದ್ದ ಪ್ರವಾಹ ನಿಯಂತ್ರಣ ಕಾಲುವೆಯ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಿರ್ಮಿಸಿದ್ದ ಅಷ್ಟು ಚರಂಡಿಯು ಕುಸಿದು ಮುಚ್ಚಿ ಹೋಗಿದ್ದು ಈ ರಸ್ತೆಯು ಅಪಾಯಕ್ಕೆ ಆಹ್ವಾನ ಕೊಡುತ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅನುದಾನದದಡಿ  ಲಕ್ಷಾಂತರ ವೆಚ್ಚದಲ್ಲಿ ಕೈಗೊಂಡ ಪ್ರವಾಹ ನಿಯಂತ್ರಣ ಚರಂಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿ ಮುಚ್ಚಿ ಹೋಗಿದೆ.ಈ…

Read More

ಪ್ರೀತಿಸಿ ವಂಚನೆ : ಗರ್ಭವತಿಯಾಗಿದ್ದ ಯುವತಿ ಹಾಗೂ ಗರ್ಭದಲ್ಲಿದ್ದ ಏಳು ತಿಂಗಳ ಮಗು ಸಾವು

ಶಿವಮೊಗ್ಗ:ಯುವಕನೊಬ್ಬ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ ಕಾರಣ ಮುಗ್ಧ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಬದುಕಿ ಬಾಳಬೇಕಾಗಿದ್ದ ಯುವತಿಯು ಮದುವೆಗೆ ಮೊದಲೇ ಗರ್ಭವತಿಯಾಗಿ ಮಗುವಿನೊಂದಿಗೆ ತಾಯಿಯೂ ಅಸುನೀಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಕುಂಸಿಯ ಅಶ್ವಿನಿಗೆ ಭದ್ರಾವತಿ ಮೂಲದ ಬಸವರಾಜ್ ಎಂಬ ಯುವಕನೊಂದಿಗೆ ಪರಿಚಯವಾಗಿ ಇಬ್ಬರಲ್ಲೂ ಪ್ರೇಮಾಂಕುರವಾಗುತ್ತದೆ.ನಂತರ ಬಸವರಾಜ್ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿದ್ದನು. ಮನೆಯಲ್ಲಿ ತಾನು ಗರ್ಭವತಿ ಎಂದು ಹೇಳಿಕೊಳ್ಳದ ಅಶ್ವಿನಿ ಹೊಟ್ಟೆ ಮುಂದೆ ಬಂದಿರುವುದು ಗ್ಯಾಸ್ಟ್ರಿಕ್ ನಿಂದ ಎಂದು ಸಾಗು ಹಾಕಿದ್ದಳು. ಏಳು…

Read More