w
Headlines
Home » ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ತೀರ್ಥಹಳ್ಳಿ ::  ತಾಲೂಕಿನ ಆಗುಂಬೆ ಘಾಟಿ ಕೆಳಭಾಗದಿಂದ  ಮೂರನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಬೆಳಗ್ಗಿನಿಂದ ಸರಿ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಘಾಟಿಯಲ್ಲಿಯೇ ಜಾಮ್  ಆಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ತಕ್ಷಣ ಅರಣ್ಯ ಇಲಾಖೆ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದವರು ಈ ಬಗ್ಗೆ ಗಮನಹರಿಸಬೇಕು ಎಂಬುದಾಗಿ ವಾಹನ ಸವಾರರು ಮನವಿ ಮಾಡಿಕೊಂಡಿದ್ದು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಈ ರೀತಿ ರಸ್ತೆ ಬದಿಯಲ್ಲಿರುವ ಬೀಳುವ  ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಿದರೆ ಸೂಕ್ತ ಇಲ್ಲದಿದ್ದರೆ ಆಗುಂಬೆ ಘಾಟಿ ಬಳಿ  ಪ್ರತಿಬಾರಿಯೂ ವಾಹನ ಸವಾರರಿಗೆ ಈ ರೀತಿಯ ತೊಂದರೆ ಆಗುತ್ತಲೇ ಇರುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.