w
Headlines
Home » ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. 

ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು.
ರಸ್ತೆಯ ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.ನಗರದ ಎಲ್.ಬಿ.ಎಸ್ ನಗರದಿಂದ ಒಂದು ಕಿ.ಮೀ.ವರೆಗೆ ರಸ್ತೆಯ ಡಿವೈಡರ್ ಮೇಲೆ ಅಲಂಕಾರಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಆಕರ್ಷಕ ವಿದ್ಯುತ್ ದೀಪಗಳಿಗೆ ಇವತ್ತು ಸಂಜೆಯಿಂದ ಚಾಲನೆ ಸಿಕ್ಕಿದೆ. 59 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಸಲಾಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಕಾರ್ಪೊರೇಟರ್ ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪ್ರಮುಖರಾದ ಬಳ್ಳೆಕರೆ ಸಂತೋಷ್ ಸೇರಿದಂತೆ ಹಲವರು ಇದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.