w
Headlines
Home » ಸಕ್ರೆಬೈಲು ಆನೆ ಬಿಡಾರದಲ್ಲಿ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ : ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳು

ಸಕ್ರೆಬೈಲು ಆನೆ ಬಿಡಾರದಲ್ಲಿ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ : ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಅವರು ಇವತ್ತು ಭೇಟಿ ನೀಡಿದ್ದಾರೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಅಭಿಮಾನಿಗಳು ಆನೆ ಬಿಡಾರದ ಬಳಿ ಸೇರಿದ್ದರು.ಮಧ್ಯಾಹ್ನ ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ ಕಾರ್ಯ ನಡೆಸಲಾಯಿತು.

ಚಿತ್ರೀಕರಣ ನಡೆಯುತ್ತಿದ್ದ ಕಾರಣಕ್ಕೆ ಕ್ರಾಲ್ ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅರಣ್ಯಾಧಿಕಾರಿಗಳು, ಬಿಡಾರದ ಸಿಬ್ಬಂದಿಗಳು ಮತ್ತು ಚಿತ್ರೀಕರಣದ ತಂಡಕ್ಕೆ ಮಾತ್ರ ಕ್ರಾಲ್ ಒಳಗೆ ಬಿಡಲಾಯಿತು.

ಇನ್ನು, ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ನಟ ಪುನಿತ್ ರಾಜ್ ಕುಮಾರ್ ಅವರು ಕ್ರಾಲ್ ಪ್ರದೇಶದಿಂದ ಹೊರಗೆ ಬಂದು ಅಭಿಮಾನಿಗಳನ್ನು ಭೇಟಿಯಾದರು. ಅಭಿಮಾನಿಗಳಿಗೆ ಕೈ ಮುಗಿದ ಪುನಿತ್ ರಾಜ್ ಕುಮಾರ್,ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

ಡಾಕ್ಯೂಮೆಂಟರಿ ಚಿತ್ರೀಕರಣ ಮುಗಿಯುತ್ತಿದ್ದಂತೆ ಪುನಿತ್ ರಾಜ್ ಕುಮಾರ್ ಅವರು ಗಾಜನೂರಿನ ತುಂಗಾ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ವೇಳೆಗೆ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ ವೈಭವ ಕಣ್ತುಂಬಿಕೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.