w
Headlines
Home » ರಿಪ್ಪನ್ ಪೇಟೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ಸಾವು

ರಿಪ್ಪನ್ ಪೇಟೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಸಾವನ್ನಪ್ಪಿದ್ದಾನೆ.
ಹೊಸನಗರದ ಚರ್ಚ್ ರಸ್ತೆಯ ನಿವಾಸಿಯಾದ ಫ಼ೈಜಲ್(27) ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ.ಈತನು ಕಳೆದ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದನು.
ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.