w
Headlines
Home » ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ.

 ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಉಲ್ಲಾಸ್ ಅರ್ ಹಾಗೂ ಹೊಸನಗರ ಪಟ್ಟಣದ ಗುರುಮೂರ್ತಿ ಎಂ ರವರನ್ನು ಆಯ್ಕೆ ಮಾಡಲಾಗಿದೆ.
 ಪಕ್ಷದಲ್ಲಿ ನಿಷ್ಟಾವಂತರಾಗಿ ಕೆಲಸ ಮಾಡುವ ಯುವಕರಿಗೆ ಹುದ್ದೆ ನೀಡಿರುವುದು ಯುವ ಕಾರ್ಯಕರ್ತರಿಗೆ  ಸಂತೋಷವಾಗಿದೆ ಎಂದು ಈ ಸಂಧರ್ಭದಲ್ಲಿ ಉಲ್ಲಾಸ್ ಆರ್ ರವರು ತಿಳಿಸಿದ್ದಾರೆ.


ನೂತನ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಗಳಿಗೆ ಅಭಿನಂದನೆ:

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಕೆಪಿಸಿಸಿ ವಕ್ತಾರರಾದ ಮಾಜಿ ಶಾಸಕ ಶ್ರೀ ಬೇಳೂರು ಗೋಪಾಲಕೃಷ್ಣ,ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್, ಹೊಸನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹೇಂದ್ರ ಬುಕ್ಕಿವರೆ,ರಿಪ್ಪನ್ ಪೇಟೆ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಆಸೀಪ್ ಬಾಷಾಸಾಬ್,ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ರವರು ನೂತನ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಿಗೆ ಅಭಿನಂದನೆಗಳು ತಿಳಿಸಿದ್ಧಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.