ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ ಸಾವು ಸಂಭವಿಸಿರುವ ದುರಂತದ ಘಟನೆ ನಡೆದಿದೆ.
ಇದರಲ್ಲಿ ಕಾರುಚಾಲಕ ಆಗಿದ್ದ ಶಿವಮೊಗ್ಗ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ಸ್ಥಳದಲ್ಲೆ ಸಾವು ಕಂಡಿರುವ ಘಟನೆ ನಡೆದಿದೆ.ಹೊನ್ನಾಳ್ಳಿ ತಾಲ್ಲೂಕಿನ ಗೋಣಗೇರೆ ನಿವಾಸಿ ನಾಗೇಂದ್ರ (32) ಮೃತ ದುರ್ದೈವಿಯಾಗಿದ್ದಾನೆ.
ನಾಗೇಂದ್ರ ಅವರು ಕಾರಿನಲ್ಲಿ ಬೇಕರಿ ಐಟಂಗಳನ್ನು ಆಯನೂರಿನಿಗೆ ಕೊಟ್ಟು ತನ್ನ ಅತ್ತೆಯ ಮನೆಯಾದ ಸೋಮಿನಕೊಪ್ಪಕ್ಕೆ ತೆರಳುತ್ತಿದ್ದಾಗ ಶಿವಮೊಗ್ಗದಿಂದ ಬಂದ ಲಾರಿಯೊಂದು ಮುಂದೆ ಹೋಗುತ್ತಿದ್ದ ಲಾರಿಗೆ ಓವರ್ ಟೇಕ್ ಮಾಡಲು ಹೋದಾಗ ಲಾರಿಯ ಸ್ಟೇರಿಂಗ್ ಕಟ್ಟಾಗಿ ಆಯನೂರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್