ಸೊರಬ : ತಾಲೂಕಿನ ಶಿಡ್ಡಿಹಳ್ಳಿ ಗ್ರಾಮದಿಂದ ಹಸ್ವೀ ಗ್ರಾಮಕ್ಕೆ ಪ್ಯಾಸೆಂಜರ್ ಆಟೋದಲ್ಲಿ ತೆರಳುವಾಗ 9 ವರ್ಷದ ಬಾಲಕ ಆಟೋದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಆನವಟ್ಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
ಮಾಲತೇಶ್ ಎಂಬ 9 ವರ್ಷದ ಬಾಲಕ ಪ್ಯಾಸೆಂಜರ್ ಆಟೋದ ಹಿಂಬದಿಯ ಫುಟ್ ಬೋರ್ಡ್ ನಲ್ಲಿ ನಿಂತಿದ್ದು, ಆಟೋವನ್ನು ಅರುಣ್ ಎಂಬ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷದಿಂದ ಚಲಾಯಿಸಿದ ಪರಿಣಾಮ ಮಾಲತೇಶ್ ಶಿಡ್ಡಿಹಳ್ಳಿ ಗ್ರಾಮದ ಈಶ್ವರ ದೇವಸ್ಥಾನದ ತಿರುವಿನ ಬಳಿ ಬಿದ್ದಿದ್ದಾನೆ.
ಎದೆ ಹಾಗೂ ಎಡಕಣ್ಣಿಗೆ ತೀವ್ರವಾಗಿ ಹೊಡೆತ ಬಿದ್ದ ಬಾಲಕನನ್ನ ಗ್ರಾಮಸ್ಥರು ಉಪಚರಿಸಿ ಮಾಲತೇಶ್ ತಂದೆ ನಿಂಗಪ್ಪನಿಗೆ ಮೊಬೈಲ್ ನಲ್ಲಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ತಾಯಿ ಆತನನ್ನ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾಲತೇಶ್ ಮಾರ್ಗ ಮಧ್ಯೆದಲ್ಲಿ
ಅಸುನೀಗಿದ್ದಾನೆ.
ಆಟೋಗೆ ಇನ್ನೂ ನೋಂದಣಿ ನಂಬರ್ ಹಾಕಿರಲಿಲ್ಲ ಹಾಗೂ ತ್ರಿಚಕ್ರ ಆಟೋವಾಗಿದ್ದು ಚಾಲಕ ಅರುಣ್ ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕನ ತಂದೆ ನಿಂಗಪ್ಪ ಎಫ್ ಐಆರ್ ನಲ್ಲಿ ತಿಳಿಸಿದ್ದಾರೆ. ಈ ಘಟನೆ ಅ.19 ರಂದು ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್