Categories: Blog

ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ  ಹಕ್ಕು ಪತ್ರವನ್ನು ನೀಡಲಾಗಿತ್ತು.

ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆಯ ಟಿ.ಆರ್.ಕೃಷ್ಣಪ್ಪ ಪೊಲೀಸ್ ಠಾಣೆಗೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ಅರ್ಜಿ ನೀಡಿ ಇಂದು ಇಲ್ಲಿನ ಗ್ರಾಮ ಪಂಚಾಯತ್ ಕಛೇರಿ ಎದುರು ಅರೆ ಬೆತ್ತಲಾಗಿ ತಲೆಕೆಳಗಾಗಿ ನಿಲ್ಲುವುದರೊಂದಿಗೆ ನ್ಯಾಯಕ್ಕಾಗಿ ಹೋರಾಟ ನಡೆಸಿದ ಘಟನೆ ನಡೆಯಿತು.
ಸುಮಾರು 15 ವರ್ಷಗಳ ಹಿಂದೆ ಸದರಿ ಜಾಗವನ್ನು ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರು ಸಾಗುವಳಿ ಮಾಡಿಕೊಂಡಿದ್ದು ಈ ಜಾಗವನ್ನು ದರಖಾಸ್ತು ಯೋಜನೆಯಡಿ ಮಂಜೂರಾತಿ ಮಾಡುವ ಮೂಲಕ ನಾಗಪ್ಪನವರ ಹೆಸರಿಗೆ ಖಾತೆ ಪಹಣಿ ದಾಖಲಾಗಿದ್ದು ಇದೇ ಜಾಗದಲ್ಲಿ ಎಂ.ಪಿ.ಎಂ ಅರಣ್ಯ ಇಲಾಖೆಯವರು ಪ್ಲಾಂಟೇಷನ್ ಮಾಡುವುದರೊಂದಿಗೆ ಈಗ ಕಟಾವು ಮಾಡುತ್ತಿದ್ದು ಈ ಬಗ್ಗೆ ಇಲಾಖೆಯ ವಲಯ ಅರಣ್ಯಾಧಿಕಾರಿಗಳ ಗಮನ ಸೆಳೆಯಲಾಗಿ ನಮಗೆ ಈ ಹಿಂದೆ ಒಟ್ಟು 40 ವರ್ಷದ ಅವಧಿಗೆ ಲೀಸ್ ನೀಡಲಾಗಿದೆ ಎಂದು ಹೇಳಿ ನಾಗಪ್ಪ ಬೆಳೆದ ಅಕೇಶಿಯಾ ಮರಗಳ ಕಟಾವು ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಆರೋಪಿಸಿ ಈ ಕೂಡಲೇ ಕಟಾವು ತಡೆ ಹಿಡಿದು ಪರಿಶಿಷ್ಟ ಜಾತಿಯ ನಾಗಪ್ಪನಿಗೆ ನ್ಯಾಯಕೊಡಿಸಿ ಎಂದು ತೀರ್ಥಹಳ್ಳಿ ಡಿವೈಎಸ್‌ಪಿಯವರಿಗೆ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಅರ್ಜಿ ನೀಡುವುದರೊಂದಿಗೆ ಇಂದು ಬೆಳಗ್ಗೆ ಸ್ಥಳೀಯ ಗ್ರಾಮ ಪಂಚಾಯ್ತಿ ಮುಂಭಾಗ ಅರೆ ಬೆತ್ತಲೆಯಾಗಿ ತಲೆಕೆಳಗಾಗಿ ನಿಂತು ವಿನೂತನವಾಗಿ ಪ್ರತಿಭಟನೆ ನಡೆಸಿದರು.


ವರದಿ : ದೇವರಾಜ್ ಆರಗ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

3 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago