ತೀರ್ಥಹಳ್ಳಿ : ತಾಲೂಕಿನಾದ್ಯಂತ ಇತ್ತೀಚಿಗೆ ಅತೀ ಹೆಚ್ಚು ಸುದ್ದಿ ಮಾಡಿದ್ದೂ ಎಂದರೆ ಅದು ಶರಾವತಿ ಸಂತ್ರಸ್ತರ ಹೋರಾಟ. ಹೌದು ಈಗಾಗಲೇ ತಾಲೂಕಿನ ಹಣಗೇರೆ ಕಟ್ಟೆ ಸಮೀಪ ಕಲ್ಲುಕೊಪ್ಪದಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ಮಾಡಿ ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಶರಾವತಿ ಮುಳುಗಡೆ ಸಂತ್ರಸ್ತರು ಈಗ ದೇವರ ಮೊರೆ ಹೋಗಿದ್ದಾರೆ.
ಕಲ್ಲುಕೊಪ್ಪದಿಂದ ಸುಮಾರು 21 ಜನ ಧರ್ಮಸ್ಥಳಕ್ಕೆ ಕಾಲ್ನಡಿಗೆ ಮೂಲಕ ಪಾದಯಾತ್ರೆ ಸಂಚರಿಸಲಿದ್ದಾರೆ.
ಬರಿ ಕಾಲಿನಲ್ಲಿ ಅಂದಾಜು 200 ಕಿ ಮೀ ನೆಡೆದು ಧರ್ಮಸ್ಥಳದ ಮಂಜುನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಸಂಕ್ಲಾಪುರ ಮತ್ತು ಕಲ್ಲು ಕೊಪ್ಪದ ಶರಾವತಿ ಮುಳುಗಡೆ ಸಂತ್ರಸ್ಥರಾದ ರಾಘವೇಂದ್ರ ಸಂಕ್ಲಾಪುರ,ಪುರುಷೋತ್ತಮ, ದಿನೇಶ , ಸುದರ್ಶನ , ಚೇತನ , ಪ್ರತೀಕ , ಭರತ್ , ಜಗದೀಶ ಹಾಗೂ 21 ಜನರ ತಂಡ ಈವರೆಗೆ ಹಲವಾರು ಹೋರಾಟವನ್ನು ಮಾಡಿ ಫಲಕಾರಿಯಾಗದ ಕಾರಣ ಇದೀಗ ದೇವರ ಮೊರೆ ಹೋಗಲು ನಿರ್ಧರಿಸಿ ಧರ್ಮಸ್ಥಳದ ವರೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ವರದಿ : ಪ್ರಶಾಂತ್ ಮೇಗರವಳ್ಳಿ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್