ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.

ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ  ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು.

ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ. ರತ್ನಾಕರ ಸಿ ಕುನುಗೋಡು ಇವರ ‘ಬೇರು ಬಿಳಲು- ಸಾಂಸ್ಕೃತಿಕ ಚರಿತ್ರೆಯ ಮರುರಚನಾ ನೆಲೆಗಳು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ, ಕೃತಿ ವಿಶ್ಲೇಷಣೆ ಮಾಡುತ್ತಾ ಸಂಶೋಧನಾಸಕ್ತರಿಗೆ ಮೌಲಿಕ ಒಳನೋಟಗಳನ್ನು ನೀಡುವುದರ ಜೊತೆಗೆ ಎಲ್ಲಾ ಬಗೆಯ ಓದುಗರಿಗೂ ಅಪ್ಯಾಯಮಾನವೆನಿಸುವ ಭಾಷೆ, ವಿಚಾರ ಮಂಡನೆಯ ಶೈಲಿಯನ್ನು  ಲೇಖಕರು ಪ್ರಬುದ್ಧವಾಗಿ ಕಟ್ಟಿಕೊಟ್ಟಿದ್ದಾರೆ ಎಂದರು.
ಕೃತಿಯನ್ನು ಲೋಕಾರ್ಪಣೆಗೊಳಿಸಿದ ನೀನಾಸಂ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರು, ಶಿವಮೊಗ್ಗ ರಂಗಾಯಣದ ನಿಕಟಪೂರ್ವ ನಿರ್ದೇಶಕರಾದ  ಡಾ. ಎಂ. ಗಣೇಶ್ ಅವರು; ಬಹುಚರ್ಚಿತ ಕನ್ನಡ ನಾಟಕಗಳನ್ನು ಗಂಭೀರ ಅಧ್ಯನಕ್ಕೊಳಪಡಿಸಿದ ಈ ಕೃತಿಯು; ಹೊಸ ಅದ್ಯಯನಕಾರರಿಗೆ ಮಾರ್ಗದರ್ಶಕ ಕೈಪಿಡಿಯಂತಿದೆ. ಕೃತಿಯ ಲೇಖಕರ ವ್ಯಾಪಕ ಓದು, ಗ್ರಹಿಕೆಯ ಕ್ರಮ, ಮಂಡನೆಯ ಶೈಲಿ, ನಿರೂಪಣಾ ತಂತ್ರ ವಿಭಿನ್ನವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಅವರು ಮಾತನಾಡಿ; ವಿಶ್ವವಿದ್ಯಾಲಯದಲ್ಲಿ ಮಂಡನೆಯಾಗಿ ಡಾಕ್ಟರೇಟ್ ಪಡೆಯುವ ಸಂಶೋಧನಾ ನಿಬಂಧಗಳು ಸಾರ್ವಜನಿಕವಾಗಿ ಮೌಲ್ಯಮಾಪನಕ್ಕೆ ಒಳಗಾಗದೆ ಕೊಠಡಿಗಳಲ್ಲಿಯೇ ಕೊಳೆಯುತ್ತಿವೆ. ಸಮಾಜಕ್ಕೆ ಬೌದ್ಧಿಕ ಪ್ರಚೋದನೆ ನೀಡುವ ಇಂತಹ ಸಂಶೋದನಾ ಮಹಾಪ್ರಬಂಧ ಲೋಕಾರ್ಪಣೆಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಹಿರಿಯ ಸಾಹಿತಿ ಡಾ. ಮಾರ್ಷಲ್ ಶರಾಂ ಮಾತನಾಡಿ; ಕವಿತೆಗಳ ಮೂಲಕ ತಮ್ಮ ಪ್ರತಿಭೆಯನ್ನು ತೋರುತ್ತಿರುವ ಕವಿ ಡಾ. ರತ್ನಾಕರ ಕುನುಗೋಡು ಅವರು, ಸಂಶೋಧನೆಯ ಕ್ಷೇತ್ರದಲ್ಲೂ ಹೊಸ ಭರವಸೆ ಮೂಡಿಸಿದ್ದಾರೆ. ಸಾಹಿತ್ಯ ಜಗತ್ತಿಗೆ ಗಟ್ಟಿಯಾದ ದನಿಯೊಂದು ಸೇರ್ಪಡೆಗೊಂಡಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಾಹಿತಿ ಜಿ. ಟಿ. ಸತ್ಯನಾರಾಯಣ ಕರೂರು ಅವರು; ಈ ಕೃತಿಯ ಕರ್ತೃವಿನ ಬೇರು ಶರಾವತಿ ಮುಳುಗಡೆಯಲ್ಲಿದೆ. ವಿದ್ಯುತ್ ಯೋಜನೆಗಾಗಿ ಸ್ಥಳಾಂತರಗೊಂಡ  ಕುಟುಂಬದಿಂದ ಬಂದ ರತ್ನಾಕರ ಅವರು ತಮ್ಮ ನೆಲಮೂಲ ಸಂವೇದನೆಯನ್ನು ಸಂಶೋಧನೆಯ ತಾತ್ವಿಕತೆ ಯಾಗಿ ದುಡಿಸಿಕೊಂಡ ರೀತಿ ಅನನ್ಯವಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.

ಪ್ರೊ. ಚಂದ್ರಶೇಖರ. ಟಿ, ಮಂಜುನಾಥ ಕಾಮತ್, ಸತೀಶ್ ಎನ್ ರಿಪ್ಪನ್ ಪೇಟೆ, ಏಸು ಪ್ರಕಾಶ್,   ಡಾ. ಗಣೇಶ ಕೆಂಚನಾಲ, ಸತ್ಯನಾರಾಯಣ ಸಿರಿವಂತೆ, ಮುಂತಾದವರು ಉಪಸ್ಥಿತರಿದ್ದರು. ಸೃಜನ್ ಹೆಗಡೆ ಪ್ರಾರ್ಥಿಸಿ, ಪ್ರತಿಮಾ ಸ್ವಾಗತಿಸಿ, ಸುರೇಶ್ ಜಂಬಾನಿ ಕಾರ್ಯಕ್ರಮ ನಿರೂಪಿಸಿದರು.




ವರದಿ : ಸೆಬಾಸ್ಟಿಯನ್ ಮ್ಯಾಥ್ಯೂಸ್‌
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

50 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago