ಬಿಜೆಪಿ ರಾಜ್ಯಾಧ್ಯಕ್ಷ ಕಟೀಲರನ್ನ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಕೃತಿ ದಹನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇಂದು ಪಟ್ಟಣದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು.

ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎಂದು ಹೇಳಿದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ
ಹೆಚ್.ಎಸ್.ಸುಂದರೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನ ಮರೆಮಾಚಿಸಲು ಜನರ ಗಮನ ಬೇರೆಡೆ ತಿರುಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದ್ದು ನಳೀನ್
ಕಟೀಲ್ ನಮ್ಮ ನಾಯಕರ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾರೆ.
ನಳಿನ್ ಕುಮಾರ್ ಅಷ್ಟೇ ಅಲ್ಲದೇ ಬಿಜೆಪಿಯ ಹಲವು ಮಂದಿ ಈ ರೀತಿಯ ಹೇಳಿಕೆ ನೀಡುತ್ತಿದ್ದು ಜೋಕರ್ ರೀತಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಳಿನ್ ಕುಮಾರ್ ಕಟೀಲ್ ಬಾವ ಚಿತ್ರಕ್ಕೆ ಚಪ್ಪಲಿ ಹಾರ  ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ  ಆಕ್ರೋಶ  ವ್ಯಕ್ತ ಪಡಿಸಿದ  ಶಿವಮೊಗ್ಗ  ಜಿಲ್ಲಾ ಕಾಂಗ್ರೆಸ್ ಬಿಜೆಪಿ  ಯಲ್ಲಿ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ  ಇರುವಂಥವರು ತಮ್ಮ  ಎಲ್ಲಾ ತಪ್ಪುಗಳನ್ನು ಮರೆ ಮಾಚುಲು  ಅವರು ಮಾಡಿದಂತಹ ಆಡಳಿತ ವೈಪಲ್ಯಗಳನ್ನು ದೌರ್ಜನ್ಯಗಳು  ಪ್ರತಿಯೊಂದನ್ನು ಮರೆಮಾಚುವ  ದೃಷ್ಟಿಯಿಂದ ದಿನಕ್ಕೆ ಒಬ್ಬರಂತೆ ಸುಳ್ಳು ಹೇಳುತ್ತಿದ್ದಾರೆ

ಕೆಟ್ಟ ರೀತಿಯಲ್ಲಿ ಮಾತನಾಡಿದರೆ  ಮಾಧ್ಯಮದಲ್ಲಿ  ಪ್ರಚಾರ ಗಿಟ್ಟಿಸ ಬಹುದೆಂದು  ಬಾಯಿಗೆ ಬಂದ ಹಾಗೆ  ಮಾತಾಡುತಿದ್ದಾರೆ

ನಳಿನ್ ಕುಮಾರ್ ಕಟೀಲ್ ಇರ ಬಹುದು  ಶಿವಮೊಗ್ಗ  ಉಸ್ತುವಾರಿ ಮಂತ್ರಿ ಈಶ್ವರಪ್ಪ  ಶಾಸಕ  ರೇಣುಕಾಚಾರ್ಯ  ಸಿ ಟಿ ರವಿ, ಶೋಭಾ ಕರಂದ್ಲಾಜೆ  ಇರಬಹುದು ಈವರೆಲ್ಲ  ಜೋಕರ್ ತರಹ  ಮಾತಾಡುತಿದ್ದಾರೆ ಇದು  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಘೋರ  ಅಪರಾಧ,ಜನ ಪ್ರತಿನಿಧಿಯಾಗಿ  ಮಾತನಾಡಬೇಕಾದರೆ  ಲಂಗು ಲಾಗಾಮು ಇರಬೇಕು  ಸಂಸ್ಕೃತಿ ಬೇಕಾಗುತ್ತದೆ

ಬಾಯಿಗೆ ಬಂದ ಹಾಗೆ  ಮಾತನಾಡುವ  ಬಿಜೆಪಿ ರಾಜ್ಯ ಅಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನ ದಿಂದ ವಜಾ  ಮಾಡಬೇಕೆಂದು  ಶಿವಮೊಗ್ಗ  ಜಿಲ್ಲಾ ಕಾಂಗ್ರೆಸ್  ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಒತ್ತಾಯಿಸಿದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 hour ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

24 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago