ಭದ್ರಾವತಿ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚೆಕ್ ಪೋಸ್ಟ್ ನಲ್ಲಿ ಭದ್ರಾವತಿ ಕಡೆಯಿಂದ ಬಂದ ಬುಲೆರೋ ಪಿಕಪ್ ವಾಹನ ಸಂಖ್ಯೆKA14C2174 ಗಾಡಿಯಲ್ಲಿ 20ಕೆಜಿ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.
ಗೊಂದಿ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿರುವಾಗ ಭದ್ರಾವತಿ ಕಡೆಯಿಂದ ಬಂದ ಬೊಲೇರೊ ಪಿಕಪ್ ನಿಲ್ಲಿಸಲು ಸೂಚಿಸಿದರು ನಿಲ್ಲಿಸಿದೆ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಸಿ ಗಲಾಟೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಆರೋಪಿಗಳನ್ನು ವಿಚಾರಿಸಿದಾಗ ಸದರಿ ವಾಹನದಲ್ಲಿ ಆಂಧ್ರಪ್ರದೇಶದ ತುಣಿ ಎಂಬ ಊರಿನ ಹತ್ತಿರದ ಹಳ್ಳಿಯಿಂದ ಮಾದಕವಸ್ತು ಗಾಂಜಾವನ್ನು ಮಾರಾಟಮಾಡುವ ಉದ್ದೇಶದಿಂದ ತರುತ್ತಿರುವುದಾಗಿ ತಿಳಿದು ಬಂದಿರುತ್ತದೆ.
ನಂತರ ವಾಹನವನ್ನು ತಪಾಸಣೆ ಮಾಡಿದಾಗ ಗಾಂಜಾ ಇರುವುದು ಕಂಡುಬಂದಿದ್ದು ಎರಡು ಜನ ಆರೋಪಿಗಳನ್ನು ವಶಕ್ಕೆ ಪಡೆದು ಅಂದಾಜು ಮೌಲ್ಯ 3,00,000 ರೂ ಗಳ 20 ಕೆಜಿ ಒಣ ಗಾಂಜಾ, ಮೊಬೈಲ್ ಫೋನ್ & ಕೃತ್ಯಕ್ಕೆ ಬಳಸಿದ ಬುಲೆರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡು ಗುನ್ನೆ ಸಂಖ್ಯೆ:209/2021 ಕಲಂ 353 ಐಪಿಸಿ &8(C),20(B)(ii)(C)NDPS ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್