ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು, ಈ ಪೈಕಿ ಗೀತಾ 20, ಮಂಜುಳ 12 ಮತ್ತು ಶಶಿಕಲಾ 4 ಮತಗಳನ್ನು ಪಡೆದುಕೊಂಡರು.
ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ವಾರ್ಡ್ ನಂ.9ರ ಚನ್ನಪ್ಪ ಮತ್ತು ಜೆಡಿಎಸ್ ಪಕ್ಷದಿಂದ ವಾರ್ಡ್ ನಂ. 25 ರ ಕೆ. ಉದಯ ಕುಮಾರ್ ಸ್ಪರ್ಧಿಸಿದ್ದು, ಈ ಪೈಕಿ ಚನ್ನಪ್ಪ 20 ಮತಗಳನ್ನು ಹಾಗು ಕೆ. ಉದಯ ಕುಮಾರ್ 12 ಮತಗಳನ್ನು ಪಡೆದುಕೊಂಡರು. ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 4 ಸದಸ್ಯರು ತಟಸ್ಥವಾಗಿ ಉಳಿದುಕೊಂಡರು.
ಒಟ್ಟು 34 ಸದಸ್ಯರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ 1 ಮತ ಹೊಂದಿದ್ದಾರೆ. ಒಟ್ಟು 36 ಮತಗಳು ಚಲಾವಣೆಗೊಂಡಿವೆ. ನಗರಸಭೆಯಲ್ಲಿ ಕಾಂಗ್ರೆಸ್ 18, ಜೆಡಿಎಸ್ 12, ಬಿಜೆಪಿ 4 ಮತ್ತು 1 ಪಕ್ಷೇತರ ಸದಸ್ಯರಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿದ್ದರು. ಚುನಾವಣಾಧಿ ಕಾರಿಯಾಗಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಕರ್ತವ್ಯ ನಿರ್ವಹಿಸಿದರು. ಪೌರಾಯುಕ್ತ ಕೆ. ಪರಮೇಶ್ ಇದ್ದರು.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…