Headlines

ಭದ್ರಾವತಿ : ಸಕ್ರೀಯ ರಾಜಕಾರಣಕ್ಕೆ ಶಾರಾದ ಅಪ್ಪಾಜಿ ಗೌಡ ಎಂಟ್ರಿ


ಭದ್ರಾವತಿ : ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಗೌಡರವರ ಪತ್ನಿ ಶಾರದ ಅಪ್ಪಾಜಿ ಗೌಡ ರವರು ಶನಿವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದರು.

ಇತ್ತೀಚಿಗೆ ತಾಲೂಕಿನ ಗೋಣಿಬೀಡಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿ ಗೌಡ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ ಶಾರದ ಅಪ್ಪಾಜಿ ಗೌಡ ಅವರನ್ನು ಭದ್ರಾವತಿಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರು.

ಅದೇ ವೇದಿಕೆಯಲ್ಲಿ ಅ.2 ರ ಗಾಂಧಿ ಜಯಂತಿಯಂದು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಂದಿನ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವುದಾಗಿ ಶಾರದಾ ಅಪ್ಪಾಜಿ ಘೋಷಿಸಿದ್ದರು. ಅದರಂತೆ ಮಹಾತ್ಮಗಾಂಧಿ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮುಂದಿನ ರಾಜಕೀಯ ಜೀವನ ಪತಿ ಅಪ್ಪಾಜಿಯವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ಮುನ್ನಡೆಯುತ್ತೇನೆ ಎಂದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು, ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *