ರಿಪ್ಪನ್ ಪೇಟೆ : ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟ,ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಪಟ್ಟಣದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹಾಗೂ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ ಯವರು ದಿನಾಂಕ 5 ರ ಮಂಗಳವಾರ ದಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯ ತಜ್ಞ ಹೃದ್ರೋಗ ವೈದ್ಯರ ತಂಡದವರಿಂದ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು ರಿಪ್ಪನ್ ಪೇಟೆಯ ಗೌಡ ಸಾರಸ್ವತ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಲಾಗಿದ್ದು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಬೇಕಾಗಿ ಮನವಿ ಮಾಡಿದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9740947451,9741743187,
8095780370