ರಿಪ್ಪನ್ ಪೇಟೆ : ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟ,ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಪಟ್ಟಣದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹಾಗೂರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ ಯವರು ದಿನಾಂಕ 5 ರ ಮಂಗಳವಾರ ದಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯ ತಜ್ಞ ಹೃದ್ರೋಗ ವೈದ್ಯರ ತಂಡದವರಿಂದ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು ರಿಪ್ಪನ್ ಪೇಟೆಯ ಗೌಡ ಸಾರಸ್ವತ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಲಾಗಿದ್ದು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಬೇಕಾಗಿ ಮನವಿ ಮಾಡಿದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9740947451,9741743187,
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್