Headlines

ರಿಪ್ಪನ್ ಪೇಟೆ : ಎರಡು ತಿಂಗಳು ಜೀವನ್ಮರಣ ಹೋರಾಟ ನಡೆಸಿದ್ದ ಮಗು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ್ದ ಹಸುಗೂಸು  ಚಿಕಿತ್ಸೆಗೆ ಸ್ಪಂದಿಸದೇ ಇಂದು ಮಧ್ಯಾಹ್ನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಹದಿನೈದು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಹಸುಗೂಸು ಮೃತಪಟ್ಟಿದೆ.

ಸುಮಾರು ಎರಡು ತಿಂಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಮಗುವಿನ ಕುಟುಂಬಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ  ರವರು ಕೆಲ ದಿನಗಳ ಹಿಂದೆ ಧೈರ್ಯ ತುಂಬಿದ್ದರು.


Leave a Reply

Your email address will not be published. Required fields are marked *